Belagavi News In Kannada | News Belgaum

ವಿಶಾಖಪಟ್ಟಣಂ ಆಂಧ್ರಪ್ರದೇಶದ ಹೊಸ ರಾಜಧಾನಿ ಎಂದು ಘೋಷಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ

ಹೈದರಾಬಾದ್: ವಿಶಾಖಪಟ್ಟಣಂ ಆಂಧ್ರಪ್ರದೇಶದ ಹೊಸ ರಾಜಧಾನಿಯಾಗಲಿದೆ ಎಂದು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಘೋಷಿಸಿದರು.

ದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ರಾಜತಾಂತ್ರಿಕ ಒಕ್ಕೂಟದ ಸಭೆಯಲ್ಲಿ ಮಾತನಾಡಿದ ಅವರು, ಅಮರಾವತಿ ಬದಲು ವಿಶಾಖಪಟ್ಟಣಂ ರಾಜಧಾನಿಯಾಗಲಿದೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ನಮ್ಮ ರಾಜಧಾನಿಯಾಗಲಿರುವ ವಿಶಾಖಪಟ್ಟಣಕ್ಕೆ ನಾನು ನಿಮ್ಮನ್ನು ಆಹ್ವಾನಿಸುತ್ತಿದ್ದೇನೆ. ಮುಂಬರುವ ತಿಂಗಳುಗಳಲ್ಲಿ ನಾನೇ ವಿಶಾಖಪಟ್ಟಣಂಗೆ ಶಿಫ್ಟ್ ಆಗಲಿದ್ದೇನೆ. ನಾವು ಮಾರ್ಚ್ 3 ಮತ್ತು 4 ರಂದು ಜಾಗತಿಕ ಹೂಡಿಕೆದಾರರ ಶೃಂಗಸಭೆಯನ್ನು ಆಯೋಜಿಸುತ್ತಿದ್ದೇವೆ ಎಂದರು.

ನಾನು ನಿಮ್ಮೆಲ್ಲರನ್ನು ವಿಶಾಖಪಟ್ಟಣಂ ಬರಲು ಹೇಳುವುದು ಮಾತ್ರವಲ್ಲದೆ ವಿದೇಶದಲ್ಲಿರುವ ನಿಮ್ಮ ಸಹೋದ್ಯೋಗಿಗಳಿಗೆ ನಮ್ಮನ್ನು ಭೇಟಿ ವೈಯಕ್ತಿಕವಾಗಿ ಆಹ್ವಾನಿಸುತ್ತೇನೆ. ನಮ್ಮ ಆಂಧ್ರಪ್ರದೇಶದಲ್ಲಿ ವ್ಯಾಪಾರ ಮಾಡುವುದು ಎಷ್ಟು ಸುಲಭ ಎಂದು ನೀವೇ ನೋಡಿ ಎಂದು ಅವರು ಹೇಳಿದರು.