Belagavi News In Kannada | News Belgaum

ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ನೀರುಪಾಲಾದ ಘಟನೆ ನಡೆದಿದೆ.

ವಿಜಯಪುರ: ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ನೀರುಪಾಲಾದ ಘಟನೆ ಮುದ್ದೇಬಿಹಾಳ ತಾಲೂಕಿನಲ್ಲಿ ನಡೆದಿದೆ.
ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಬಳಿ ಕೆ.ಬಿ.ಜೆ.ಎನ್.ಎಲ್ ಕಾಲುವೆಯಲ್ಲಿ ಘಟನೆ ನಡೆದಿದೆ.

ರಸೂಲ್ ಮಾಲದಾರ (25) ಹಾಗೂ ಸಮಿವುಲ್ಲಾ ಗೊಳಸಂಗಿ (10) ಮೃತ ದುರ್ದೈವಿಗಳಾಗಿದ್ದಾರೆ. ಮೃತರು ಬಾಗಲಕೋಟೆ  ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದವರಾಗಿದ್ದಾರೆ.

ಮೃತರು ಕೂಲಿ ಕಾರ್ಮಿಕರಾಗಿದ್ದು, ಮುದ್ದೇಬಿಹಾಳದ ಚಿಕನ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದರು. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಹಾಗೂ ಸ್ಥಳೀಯರು ಕಾಲುವೆಯಿಂದ ಶವ ಹೊರಕ್ಕೆ ತೆಗೆದಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.