Belagavi News In Kannada | News Belgaum

ಫೆ.20ರ ಸೋಮವಾರ ಬೆಳಿಗ್ಗೆ 10. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

ಮಂಗಳೂರು: ಫೆ.20ರ ಸೋಮವಾರ ಬೆಳಿಗ್ಗೆ 10 ಗಂಟೆಯಿಂದ ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 

ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಿದ್ದಾರೆ.

ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.