ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಶಾಸಕ ರಮೇಶ್ ಜಾರಕಿಹೊಳಿ.!

ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಗುರುವಾರ ರಾತ್ರಿ ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿರುವ ರಮೇಶ ಜಾರಕಿಹೊಳಿಯವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಬಳಿ ನೂರಕ್ಕೂ ಹೆಚ್ಚು ಸಿಡಿಗಳು ಇರುವ ದಾಖಲೆ ಮತ್ತು ಸಾಕ್ಷಿಗಳ ಬಗ್ಗೆ ಅವರಿಗೆ ಮಾಹಿತಿ ನೀಡಿದ್ದು .
ಈ ಬಗ್ಗೆ ಸಿಬಿಐಗೆ ಪ್ರಕರಣ ಒಪ್ಪಿಸುವಂತೆ ಮನವರಿಕೆ ಮಾಡಿದ್ದಾರೆ.
ರಮೇಶ ಜಾರಕಿಹೊಳಿ ಅವರು ಕೇಂದ್ರ ಗೃಹ ಸಚಿವರನ್ನು ಭೇಟಿಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಅಮಿತ್ ಶಾ ಭೇಟಿಗೂ ಮುನ್ನ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನೂ ರಮೇಶ ಜಾರಕಿಹೊಳಿ ಭೇಟಿ ಮಾಡಿದರು. ಜೊತೆಗೆ ಕೆಲವು ಹಿರಿಯ ವರಿಷ್ಠರೊಂದಿಗೂ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ.