ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕುರಿ/ಮೇಕೆ ಘಟಕ ಅನುಷ್ಟಾನಗೊಳಿಸಲು ಅರ್ಜಿ ಆಹ್ವಾನ

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕುರಿ/ಮೇಕೆ ಘಟಕ ಅನುಷ್ಟಾನಗೊಳಿಸಲು ಅರ್ಜಿ ಆಹ್ವಾನ
ಬೆಳಗಾವಿ, ಫೆ.04: ಬೆಳಗಾವಿ ಜಿಲ್ಲೆಗೆ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2022-23 ನೇ ಸಾಲಿನಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ 10+1 ಕುರಿ/ಮೇಕೆ ಘಟಕ ಅನುಷ್ಟಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಗೆ ಎಸ್.ಸಿ-08.ಎಸ್.ಟಿ-02 ಹಾಗೂ ಸಾಮಾನ್ಯ-52. ಒಟ್ಟು-62 ಗುರಿಗಳನ್ನು ನಿಗದಿಪಡಿಸಲಾಗಿದ್ದು, ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ಸದಸ್ಯತ್ವವನ್ನು ಹೊಂದಿರುವ 18 ರಿಂದ 60 ವಯೋಮಿತಿಯಲ್ಲಿರುವ ಎಸ್.ಸಿ/ಎಸ್.ಟಿ ಹಾಗೂ ಸಾಮಾನ್ಯ ವರ್ಗದ ಸದಸ್ಯರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಸದರಿ ಅರ್ಜಿಯನ್ನು ಈ ಕಛೇರಿಯಿಂದ ಅಥವಾ ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ಕಛೇರಿಗಳಲ್ಲಿ ಫೆ.06 ರಿಂದ ಪಡೆದು ಫೆ.20, 2023ರ ಒಳಗಾಗಿ ಎರಡು ಪ್ರತಿಯಲ್ಲಿ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ದೃಢೀಕರಿಸಿ ಸಲ್ಲಿಸಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ 0831-2431294 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///
ಫೆ.12 ರಂದು ಮಾಜಿ ಸೈನಿಕರ ರ್ಯಾಲಿ
ಬೆಳಗಾವಿ, ಫೆ.04: ಊಕಿ ದಕ್ಷೀಣ ಭಾರತ್ ಏರಿಯಾದ ಆಶ್ರಮದಲ್ಲಿ ಮಾಜಿ ಸೈನಿಕರ ರ್ಯಾಲಿಯನ್ನು ಫೆ.12, 2023 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ರವರೆಗೆ ಬೆಳಗಾವಿಯ ಶಿವಾಜಿ ಮೈದಾನ ಮರಾಠಾ ಲೈಟ್ ಇನ್‍ಫೆಂಟ್ರಿ ರೆಜಿಮೆಂಟಲ್ ಸೆಂಟರ್‍ನಲ್ಲಿ ನಡೆಯಲಾಗುವುದು.
ಮಾಜಿ ಸೈನಿಕರ ಸೇವೆ/ಪಿಂಚಣಿ ಸಂಬಂಧಿತ ಸಮಸ್ಯೆಗಳ ಬಗ್ಗೆ ತಮ್ಮ ಕುಂದುಕೊರತೆಗಳ ಬಗ್ಗೆ ಮಾರ್ಗದರ್ಶನ ಮತ್ತು ಸ್ಪಷ್ಟೀಕರಣವನ್ನು ಪಡೆಯಬಹುದು ಹಾಗೂ ಮಾಜಿ ಸೈನಿಕರಿಗೆ ಅನುಕೂಲವಾಗುವಂತೆ ವೈದ್ಯಕೀಯ ಶಿಬಿರ, ವಿವಿಧ ರೆಜಿಮೆಂಟಗಳಿಗೆ ಪ್ರತ್ಯೆಕ ಕಾಂಟರ ಇಅಊS, SPಂಖSಊ ಮತ್ತು ಬ್ಯಾಂಕ್ ಇತ್ಯಾದಿಗಳನ್ನು ಸ್ಥಾಪಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುರ್ನವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////
ಜಿಲ್ಲೆಯಲ್ಲಿ ಫೆ.25 ರವರೆಗೆ ನಕಲಿ ಕಾರ್ಮಿಕ ಕಾರ್ಡ ರದ್ಧತಿ ಅಭಿಯಾನ
ಬೆಳಗಾವಿ, ಫೆ.04 : ಕರ್ನಾಟಕ ಕನ್ನಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ, ಬೆಂಗಳೂರು ರವರ ಆದೇಶದಂತೆ, ನಕಲಿ ದಾಖಲೆಗಳನ್ನು ನೀಡಿ ಗುರುತಿನ ಚೀಟಿ ಪಡೆದು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಲ್ಲದ ಫಲಾನುಭವಿಗಳ ಕಾರ್ಡಗಳನ್ನು ರದ್ದು ಪಡಿಸಲು ಜಿಲ್ಲೆಯಲ್ಲಿ ಫೆ.25 ರವರೆಗೆ ರದ್ಧತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ನಕಲಿ ದಾಖಲೆ ಸೃಷ್ಟಿಸಿ ಗುರುತಿನ ಚೀಟಿ ಪಡೆದಿರುವ ಕಟ್ಟಡ ಕಾರ್ಮಿಕರಲ್ಲದ ಫಲಾನುಭವಿಗಳು ತಮ್ಮ ಸ್ವ-ಇಚ್ಛೆಯಿಂದ ಎಲ್ಲಾ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಛೇರಿಗೆ ಹೋಗಿ ಮೂಲ ಗುರುತಿನ ಚೀಟಿಗಳನ್ನು ಸಲ್ಲಿಸಲು ಸೂಚಿಸಿದೆ. ಇಲ್ಲವಾದಲ್ಲಿ ಕಾರ್ಮಿಕ ನಿರೀಕ್ಷಕರು ಖುದ್ದು ಸ್ಥಳ ಪರಿಶೀಲನೆ ನಡೆಸಿ ದಾಖಲೆ ಸೃಷ್ಟಿಸಿ ಗುರುತಿನ ಚೀಟಿ ಪಡೆದ ಮತ್ತು ಸೌಲಭ್ಯಗಳನ್ನು ಪಡೆದ ಫಲಾನುಭವಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///