Belagavi News In Kannada | News Belgaum

ಹಾಸ್ಟೇಲ್ ನಲ್ಲಿ ವಿದ್ಯಾರ್ಥಿನಿ ಅನುಮಾನಸ್ಪದ ಸಾವು: ತನಿಖೆ ಚುರುಕು

ರಾಯಚೂರುವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಹಾಸ್ಟೆಲ್​ ಕೊಠಡಿಯಲ್ಲಿ ನೇಣು ಹಾಕಿ ಕೊಂದಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪಟ್ಟಣದ ಸರ್ ಎಂ ವಿಶ್ವೇಶ್ವರಯ್ಯ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯು ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ 17 ವರ್ಷದ ವಿದ್ಯಾರ್ಥಿನಿ ಐಶ್ವರ್ಯ (17) ಕೊಲೆಯಾದ ಯುವತಿ.

ಕಾಲೇಜು ಪ್ರಾಂಶುಪಾಲ ರಮೇಶ್ ಎಂಬಾತ ಕೊಲೆ ಮಾಡಿ ತನ್ನ ವಿರುದ್ಧ ಆರೋಪ ಬರದಂತೆ ಹಾಸ್ಟೆಲ್​ ಕೊಠಡಿಯಲ್ಲಿ ನೇಣಿಗೆ ಹಾಕಿದ್ದಾರೆ ಎಂದು ಮೃತ ವಿದ್ಯಾರ್ಥಿನಿ ಫೋಷಕರು, ಸಂಬಂಧಿಕರು ಆರೋಪಿಸಿ ವಸತಿ ಕಾಲೇಜಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಸಂಜೆ ಈ ಘಟನೆ ನಡೆದಿದ್ದು, ಪ್ರಥಮ ಪಿಯು ವಿದ್ಯಾರ್ಥಿನಿ, ವಿಸಿಬಿ ಶಿಕ್ಷಣ ಸಂಸ್ಥೆ ಹಾಸ್ಟೆಲ್​ನಲ್ಲಿ ವಾಸವಿದ್ದಳು. ಆಗಾಗ ಪ್ರಿನ್ಸಿಪಾಲ್ ತನ್ನ ಕೊಠಡಿಗೆ ಕರೆಸಿಕೊಳ್ಳುತ್ತಿದ್ದನಂತೆ.

ನಿರಂತರ ಲೈಂಗಿಕ ಕಿರುಕುಳ ನೀಡಿ ಪ್ರಾಂಶುಪಾಲರೇ ಕೊಂದು ನೇಣು ಹಾಕಿದ್ದಾರೆ ಎಂದು ಆರೋಪ ಮಾಡಿ ವಸತಿ ಕಾಲೇಜಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರಾಂಶುಪಾಲ ರಮೇಶ್ ಮೇಲೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.