Belagavi News In Kannada | News Belgaum

ಬಿಜೆಪಿ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್‌ ಸೇರ್ಪಡೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಗೋಕಾಕ: ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್‌ ಸೇರ್ಪಡೆಯಾಗುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.

ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಕಾಂಗ್ರೆಸ್‌ ಮುಖಂಡಾರದ ಸುಭಾಷ್ ಗಿರಗೌಡ, ಭರತೇಶ ವೀರಭದ್ರನವರ, ಮಲ್ಲಪ್ಪ ರುದ್ರಗೌಡ, ಸುನಿಲ್ ರಾಠೋಡ, ಟಿಪ್ಪುಸುಲ್ತಾನನ ಮುಲ್ಲಾ, ಶಿವಾನಂದ ಬಸಪ್ಪ ಮಾಳಗಿ, ಪರುಶುರಾಮ ಜಾಮುನಿ ಅವರ ನೇತೃತ್ವದಲ್ಲಿ ಯಮಕನಮರಡಿ ಮತಕ್ಷೇತ್ರದ ಉಳ್ಳಾಗಡ್ಡಿ ಖಾನಾಪುರ, ಕುರಣಿ, ಕಟಾಂಬಳೆ ಗ್ರಾಮದ ಹಲವು ಯುವಕರನ್ನು ಶಾಸಕ ಸತೀಶ್‌ ಜಾರಕಿಹೊಳಿ ಅವರು ಕಾಂಗ್ರೆಸ್‌ ಸೇರ್ಪಡೆ ಮಾಡಿಕೊಂಡು ಮಾತನಾಡಿದರು.

ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಯುವಕರಿಗೆ ನಿರುದ್ಯೋಗ ಸಮಸ್ಯೆ ಕಾಡುತ್ತಿದೆ. ಆದರೆ ಈ ಎಲ್ಲ ಸಮಸ್ಯೆಗಳಿಗೆ ಯಾವ ಬಿಜೆಪಿ ನಾಯಕರು ಸ್ಪಂದಿಸುತ್ತಿಲ್ಲ. ಹೀಗಾಗಿ ಸಾರ್ವಜನಿಕರು ಕಾಂಗ್ರೆಸ್‌ ಕಡೆ ಒಲವು ತೋರುತ್ತಿದ್ದಾರೆ ಎಂದು ತಿಳಿಸಿದರು.
ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಯೋಜನೆಗಳನ್ನು ಮೆಚ್ಚಿಕೊಂಡು ಯುವಕರು ಕಾಂಗ್ರೆಸ್‌ ಸೇರ್ಪಡೆಯಾಗುತ್ತಿರುವುದು ಸಂತೋಷದ ವಿಚಾರ. ಹೀಗೆ ಅನೇಕೆ ಯುವಕರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿ 2023ರಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾದ ಯುವಕರನ್ನು ಶಾಸಕ ಸತೀಶ್‌ ಜಾರಕಿಹೊಳಿ ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಯಮಕನಮರಡಿ ಮತಕ್ಷೇತ್ರದ ಉಳ್ಳಾಗಡ್ಡಿ ಖಾನಾಪುರ, ಕುರಣಿ ಗ್ರಾಮದ ಅನೇಕ ಮುಖಂಡರು ಇದ್ದರು.