Belagavi News In Kannada | News Belgaum

ಗ್ರಾಮ ಪಂಚಾಯತಿ ಉಪ ಚುನಾವಣೆ: ಅಧಿಸೂಚನೆ ಪ್ರಕಟ

ಬೆಳಗಾವಿ, ಫೆ.08 : ಬೆಳಗಾವಿ ಜಿಲ್ಲೆಗೆ ಸಂಭಂದಿಸಿದಂತೆ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳನ್ನು ಭರ್ತಿ ಮಾಡಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಉಪ ಚುನಾವಣೆ -2023 ರ ಅಧಿಸೂಚನೆಯನ್ನು ಹೊರಡಿಸಿರುತ್ತಾರೆ.
ರಾಮದುರ್ಗ ತಾಲೂಕಿನ ನರಸಾಪುರ 1 ಸದಸ್ಯ ಸ್ಥಾನ, ಬೆಳಗಾವಿ ತಾಲೂಕಿನ ಬೆಳಗುಂದಿ, ಹಿರೇಬಾಗೇವಾಡಿ, ಮೋದಗಾ ತಲಾ 1, ಖಾನಾಪುರ 1, ಕಾಗವಾಡ ತಾಲೂಕಿನ ಉಗಾರ ಬದ್ರುಕ 1, ಗೋಕಾಕ್ ತಾಲೂಕಿನ ನಲ್ಲಾನಟ್ಟಿ 1 ಸದಸ್ಯ ಸ್ಥಾನ ಸೇರಿದಂತೆ ಒಟ್ಟು 7 ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ.
ನಾಮ ಪತ್ರ ಸಲ್ಲಿಸಲು ದಿನಾಂಕ ಫೆಬ್ರುವರಿ 14, 2023  ಮಂಗಳವಾರ ಕೊನೆಯ ದಿನವಾಗಿರುತ್ತದೆ. ಬುಧವಾರ (ಫೆ.15) ನಾಮ ಪತ್ರ ಪರಿಶೀಲಿಸುವ ಕೊನೆಯ ದಿನಾಂಕವಾಗಿರುತ್ತದೆ.
ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಫೆ.17 ಕೊನೆಯ ದಿನಾಂಕವಾಗಿರುತ್ತದೆ. ಮತದಾನ ಅವಶ್ಯವಿದ್ದರೆ, ಫೆಬ್ರುವರಿ 25 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಸಲಾಗುವುದು.
ಅದೇ ರೀತಿಯಲ್ಲಿ ಮರು ಮತದಾನ ಅವಶ್ಯವಿದ್ದಲ್ಲಿ, ಫೆಬ್ರುವರಿ 27 ರಂದು ಬೆಳಿಗ್ಗೆ 7 ಗಂಟೆಯಿಂದ 5 ಗಂಟೆಯವರೆಗೆ ಮರು ಮತದಾನ ನಡೆಯಲಿವೆ.
ಫೆ.28 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಬಂಧಿತ ತಾಲೂಕಾ ಕೇಂದ್ರಗಳಲ್ಲಿ ಮತಗಳ ಎಣಿಕೆ ಪ್ರಕ್ರಿಯೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ///

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಕ್ರೀಡಾ ತರಬೇತಿ ಶಿಬಿರ

 

ಬೆಳಗಾವಿ, ಫೆ.08  : ಬೆಳಗಾವಿಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 16 ವರ್ಷದೊಳಗಿನ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಫೆ.10 2023 ರಿಂದ 14ರ ವರೆಗೆಜಿಲ್ಲಾ ಮಟ್ಟದ ಕ್ರೀಡಾ ತರಬೇತಿ ಶಿಬಿರವನ್ನು ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ಆಯೋಜಿಸಲಾಗಿದೆ.
16 ವರ್ಷದೊಳಗಿನ ಆಸಕ್ತ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಕ್ರೀಡಾಪಟುಗಳು ಫೆ.9 2023ರ ಒಳಗಾಗಿ ಬಸವರಾಜ ಜಕ್ಕನ್ನವರ ಅವರ ದೂರವಾಣಿ ಸಂಖ್ಯೆ 7411144485 ಯನ್ನು ಸಂಪರ್ಕಿಸಿ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ 0831-2950306, 7411144485 ಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಯುವ ಸಬಲೀಕರಣ ಮತು ಕ್ರೀಡಾ ಇಲಾಖೆ ಉಪ ನಿರ್ದೇಶಕರಾಧ ಜಿನೇಶ್ವರ ಪಡನಾಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

ಅಂತರಾಷ್ಟ್ರೀಯ ಕ್ರೀಡಾಪಟುಗಳಿಗೆ ನಗದು ಪುರಸ್ಕಾರ: ಅರ್ಜಿಆಹ್ವಾನ

 

ಬೆಳಗಾವಿ, ಫೆ.08 : ಅಂತರರಾಷ್ಟ್ರೀಯ ಕ್ರೀಡಾ ಸ್ಪರ್ಧೆಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಕೇಂದ್ರ ಸರ್ಕಾರದಿಂದ ಪ್ರಸ್ತುತ ವರ್ಷದ ನಗದು ಪುರಸ್ಕಾರ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪದಕ ವಿಜೇತರಾದ ಅಂತರರಾಷ್ಟ್ರೀಯ ಕ್ರೀಡಾಪಟುಗಳು ದಿನಾಂಕ ಏಪ್ರಿಲ್ 30 2023ರ ಒಳಗಾಗಿ ಆನ್‍ಲೈನ್ ಪೋರ್ಟಲ್ hಣಣಠಿs://ಜbಣಥಿಚಿs-sಠಿoಡಿಣs.gov.iಟಿ ಮೂಲಕ ಅರ್ಜಿಗಳನ್ನು ಸಲ್ಲಿ¸ಬಹುದು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 0831-2950306 ಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಯುವ ಸಬಲೀಕರಣ ಮತು ್ತಕ್ರೀಡಾ ಇಲಾಖೆ ಉಪ ನಿರ್ದೇಶಕರಾದ ಜಿನೇಶ್ವರ ಪಡನಾಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

“ತಂಬಾಕು ಮುಕ್ತ ಯುವ ಪೀಳಿಗೆ-2025”: ಫೆ.9 ರಂದು ಕಾರ್ಯಾಗಾರ

 

ಬೆಳಗಾವಿ, ಫೆ.08  : ರಾಜ್ಯ ತಂಬಾಕು ನಿಯಂತ್ರಣ ಕೋಶ ಬೆಂಗಳೂರು ಹಾಗೂ ಪ್ರಾದೇಶಿಕ ಆಯುಕ್ತರ ಕಾರ್ಯಾಲಯ ಬೆಳಗಾವಿ ಇವರ ಸಂಯುಕ್ತಾಶ್ರಯದಲ್ಲಿ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ಮತು ಬೆಳಗಾವಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಇವರ ವತಿಯಿಂದ ವಿವಿಧ ಇಲಾಖೆಗಳ ಪಾತ್ರದ ಕುರಿತು ಬೆಳಗಾವಿ ಪ್ರಾದೇಶಿಕ ಅಧಿಕಾರಿಗಳಿಗೆ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ, “ತಂಬಾಕು ಮುಕ್ತ ಯುವ ಪೀಳಿಗೆ-2025” ಒಂದು ದಿನದ ಕಾರ್ಯಾಗಾರವನ್ನು (ಫೆ.9) ಗುರುವಾರ ಬೆಳಿಗ್ಗೆ 10.30ಕ್ಕೆ ಸುವರ್ಣ ಸೌಧ ಸಮ್ಮೇಳನ ಸಭಾಂಗಣ, 3ನೇ ಮಹಡಿ ಕೊಠಡಿ ಸಂಖ್ಯೆ-354 ರಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರರಾದ ಎಮ್. ಜಿ. ಹಿರೇಮಠ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಆರಕ್ಷಕ ಮಹಾನಿರೀಕ್ಷಕರಾದ ಎನ್. ಸತೀಶ್‍ಕುಮಾರ, ಜಿಲ್ಲಾಧಿಕಾರಿಗಳಾದ ನಿತೇಶ್ ಕೆ. ಪಾಟೀ¯ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
“ತಂಬಾಕಿನಿಂದ ಉಂಟಾಗುವ ದುಷ್ಪರಿಣಾಮ”ಗಳ ಕುರಿತು ಕೆಎಇ ಯ ಡಾ. ಗೌತಮ್ ಎಸ್. ಅತಿಥಿ ಉಪನ್ಯಾಸ ನೀಡಲಿದ್ದಾರೆ.
“ತಂಬಾಕು ಮುಕ್ತ ಯುವ ಪೀಳಿಗೆ-2025” ಅನುಷ್ಠಾನದಲ್ಲಿ ವಿವಿಧ ಇಲಾಖೆಗಳ ಪಾತ್ರದ ಕುರಿತು ರಾಜ್ಯ ತಂಬಾಕು ನಿಯಂತ್ರಣ ಕೋಶದ ರಾಜ್ಯ ಕಾರ್ಯಕ್ರಮ ವ್ಯವಸ್ಥಾಪಕಾರ ಪ್ರಭಾಕರ ಅವರು ಉಪನ್ಯಾಸ ನೀಡಲಿದ್ದಾರೆ.
ಬೆಳಗಾವಿ ನಗರ ಪೋಲಿಸ್ ಆಯುಕ್ತರಾದ ಡಾ. ಎಂ. ಬಿ. ಬೋರಲಿಂಗಯ್ಯ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಡಾ. ಸಂಜೀವ ಎಂ. ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ದರ್ಶನ ಎಚ್.ವಿ, ಹಚ್ಚುವರಿ ಆಯುಕ್ತರು ನಜಮಾ ಎಂ ಪೀರಜಾದೆ, ವಿವಿಧ ಜಿಲ್ಲೆಗಳ ಅಪರ ಜಿಲ್ಲಾಧಿಕಾರಿಗಳಾದ ಕೆ.ಟಿ. ಶಕುಂತಲಾ, ಶಂಕರಗೌಡ ವನಕ್ಯಾಳ, ಶಿವಾನಂದ ಭಜಂತ್ರಿ, ವಿವಿಧ ಇಲಾಖೆಯ ಜಂಟಿ ನಿದೇರ್ಶಕರು ಹಾಗೂ ರಾಜ್ಯ ತಂಬಾಕು ನಿಯಂತ್ರಣ ಕೋಶ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯ ಸದಸ್ಯ ಕಾರ್ಯದರ್ಶಿಗಳಾದ ಡಾ. ಕಿರಣಕುಮಾರ, ವಿಭಾಗೀಯ ಸಹ ನಿರ್ದೇಶಕರಾದ ಡಾ. ಪುಷ್ಪಾ ದೊಡ್ಡಮನಿ, ಡಾ. ಮಹೇಶ ಕೋಣಿ, ಡಾ. ಬಿ.ಎನ್. ತುಕ್ಕಾರ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ರಾಜ್ಯ ತಂಬಾಕು ನಿಯಂತ್ರಣ ಕೋಶ ವಿಭಾಗೀಯ ಸಂಯೋಜಕರಾದ ಮಹಾಂತೇಶ ಭೀಮಪ್ಪ ಉಳ್ಳಾಗಡ್ಡಿ ಅವರು ಕಾರ್ಯಕ್ರಮ ನಿರೂಪಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.//

ಶ್ರೀ ರೇಣುಕಾ ದೇವಿ ಅಂಗವಿಕಲ ವಿದ್ಯಾರ್ಥಿನಿಯರ ವಸತಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

 

ಬೆಳಗಾವಿ, ಫೆ.08  : ನಗರದ ಶ್ರೀ ರೇಣುಕಾ ದೇವಿ ಉದ್ಯೋಸ್ತ ಅಂಗವಿಕಲ ಹಾಗೂ ಅಂಗವಿಕಲ ವಿದ್ಯಾರ್ಥಿನಿಯರ ವಸತಿ ನಿಲಯ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯಾವುದೇ ಉದ್ಯೋಗದಲ್ಲಿರುವ ವಿದ್ಯಾರ್ಥಿನಿಯರು, ವಿವಿಧ ಶಾಲಾ ಕಾಲೇಜುಗಳಲ್ಲಿ ಪ್ರವೇಶ ಪಡೆದ ಹಾಗೂ ತರಬೇತಿ ಪಡಯುತ್ತಿರುವ ವಿದ್ಯಾರ್ಥಿನಿಯರಿಗೆ ವಸತಿ ನಿಲಯ ಪ್ರವೇಶವನ್ನು ಪಡೆಯಬಹುದು. ಜಿಲ್ಲೆಯ ಆಸಕ್ತ ಉದ್ಯೋಗಸ್ತ ಅಂಗವಿಕಲರು, ಅಂಗವಿಕಲ ವಿದ್ಯಾರ್ಥಿನಿಯರು ಅರ್ಜಿಗಳನ್ನು ಸಲ್ಲಿಸಬಹುದು.
ಪ್ರವೇಶ ಪಡೆದಂತಹ ಅಂಗವಿಕಲ ವಿದ್ಯಾರ್ಥಿನಿಯರಿಗೆ ವಸತಿ, ಊಟ, ಹಾಗೂ ಹೊದಿಕೆಯನ್ನು ಉಚಿತವಾಗಿ ನೀಡಲಾಗುವುದು.
ಅರ್ಜಿ ಸಲ್ಲಿಸವ ಕೊನೆಯ ದಿನಾಂಕ ಫೆ.20 2023 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9448974894 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಸಂಚಾಲಕರಾದ ಸವಿತಾ ಎಸ್. ಕಾಂಬಳೆ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.///

ಶ್ರೀ ರೇಣುಕಾ ದೇವಿ ಅಂಗವಿಕಲ ವಿದ್ಯಾರ್ಥಿನಿಯರ ವಸತಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಬೆಳಗಾವಿ, ಫೆ.08   : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅನುದಾನದಡಿ ಬೆಳಗಾವಿ ನಗರದ ಡಾ. ಬಿ.ಆರ್.ಅಂಬೇಡ್ಕರ್ ಹರಿಜನ ಶಿಕ್ಷಣ ಸಂಸ್ಥೆಯ ವತಿಯಿಂದ ರುಕ್ಮಿಣಿ ನಗರದಲ್ಲಿರುವ ಜನತಾ ಕಾಲನಿ, ಮಾಳಮಾರುತಿ ಬಡಾವಣೆಯಲ್ಲಿ ಉದ್ಯೋಗಸ್ಥ ವಿಕಲಚೇತನ ವಿದ್ಯಾರ್ಥಿನಿಯರಿಗೆ ತರಬೇತಿ ನಿಡಲಾಗುವುದು.

ತರಬೇತಿ ಪಡೆಯುತ್ತಿರುವ ವಿಕಲಚೇತನ ವಿದ್ಯಾರ್ಥಿನಿಯರಿಗೆ ಉಚಿತ ವಸತಿ ನಿಲಯವನ್ನು ನೀಡಲಾಗುವುದು.
ಸದರಿ ವಿಕಲಚೇತನ ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ವಸತಿ ನಿಲಯಕ್ಕೆ ಪ್ರವೇಶವನ್ನು ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ದೂರವಾಣಿ ಸಂಖ್ಯೆ: 0831-2476096/7 ಹಾಗೂ ಸಂಸ್ಥೆಯ ಪದಾಧಿಕಾರಿಗಳ ಮೋಬೈಲ್ ಸಂಖ್ಯೆ: 9483317700 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ನಾಮದೇವ ಬಿಲ್ಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

ಬೈಲಹೊಂಗಲ ತಾಲೂಕ ಮಟ್ಟದ ಸಂಜೀವಿನಿ ಮಹಿಳಾ ಒಕ್ಕೂಟ ರಚನೆ

ಬೆಳಗಾವಿ, ಫೆ.08   : ಬೈಲಹೊಂಗಲ ತಾಲೂಕ ಪಂಚಾಯತ ಸಭಾ ಭವನದಲ್ಲಿ ತಾಲೂಕ ಮಟ್ಟದ ಸಂಜೀವಿನಿ ಮಹಿಳಾ ಒಕ್ಕೂಟ ರಚನೆ ಸಭೆ ಫೆ.8. ಏರ್ಪಡಿಸಲಾಗಿತ್ತು.
ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಕಾರ್ಯಕ್ರಮ ಉದ್ಘಾಟಿಸಿದರು. ಓಖಐಒ ಯೋಜನೆಯ ಜಿಲ್ಲಾ ವ್ಯವಸ್ಥಾಪಕರಾದ ಬಾಳಗೌಡ ಪಾಟೀಲ ಅವರು ತಾಲೂಕ ಮಟ್ಟದ ಒಕ್ಕೂಟ ರಚನೆಯ ಪ್ರಕ್ರಿಯೆ ಬಗ್ಗೆ ಮಾಹಿತಿಯನ್ನು ನೀಡಿದರು.
ಎಲ್ಲಾ ಗ್ರಾಮ ಪಂಚಾಯತ ಮಟ್ಟದ ಸಂಜೀವಿನಿ ಮಹಿಳಾ ಒಕ್ಕೂಟ ಅಧ್ಯಕ್ಷರು/ಕಾರ್ಯದರ್ಶಿಗಳ ಒಪ್ಪಿಗೆ ಮೇರೆಗೆ ಪದಾಧಿಕಾರಿಗಳ ಆಯ್ಕೆಯ ಪ್ರಕ್ರಿಯೆಯನ್ನು ಸರ್ವಾನುಮತದಿಂದ ಒಪ್ಪಿ ಠರಾವ ಪಾಸು ಮಾಡಲಾಯಿತು. ಅಧ್ಯಕ್ಷರಾದ ಪೂಜಾ ಹೊಳಿ, ಉಪಾಧ್ಯಕ್ಷರಾದ ಮಹಾದೇವಿ ಬೆಟಗೇರಿ, ಕಾರ್ಯದರ್ಶಿಯಾಗಿ ಮಂಜುಳಾ ಉಪಾಧ್ಯೆ, ಸಹಕಾರ್ಯದರ್ಶಿಯಾದ ಜಯದೇವಿ ಅಂಗಡಿ ಮತ್ತು ಖಜಾಂಚಿಯಾಗಿ ಅನಸೂಯಾ ಪೂಜೇರಿಯವರನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ತಾಲೂಕು ಪಂಚಾಯತಿಯ ವ್ಯವಸ್ಥಾಪಕರಾದ ಇಂಚಲಮಠ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಪ್ರಕಾಶ ಗುಂಡಗವಿ, ಸಮೂಹ ಮೇಲ್ವೀಚಾರಕರಾದ ಸಚಿನ ಗುರುವನ್ನವರ, ಸೋಮನಾಥ ಹುನಗುಂದ ರವರು ಹಾಗೂ ಬಿ.ಆರ್ಪಿ ಬಸಮ್ಮ ಸಂಬರಗಿ ಹಾಗೂ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟದ ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಸದಸ್ಯರು, ಎಂಬಿಕೆ ಎಲ್.ಸಿಆರ್ಪಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.///