Belagavi News In Kannada | News Belgaum

18 ವಿಧಾನಸಭಾ ಮತಕ್ಷೇತ್ರಗಳಲ್ಲಿ ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಪ್ರವಾಸ ಹಮ್ಮಿಕೊಳ್ಳಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌

ಗೋಕಾಕ:  ಫೆ. 24ರಿಂದ ನಾಲ್ಕು ದಿನಗಳ ಕಾಲ ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಮತಕ್ಷೇತ್ರಗಳಲ್ಲಿ ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಪ್ರವಾಸ ಹಮ್ಮಿಕೊಳ್ಳಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.

 

ನಗರದ ಹಿಲ್ಲ್‌ ಗಾರ್ಡನ್‌ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಫೆ. 28 ರಂದು ಸಂಜೆ ಗೋಕಾಕನಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗುವುದು. 2023ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿಈಗಾಗಲೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 1ನೇ ಹಂತದಲ್ಲಿ ಪ್ರಜಾಧ್ವನಿ ಯಾತ್ರೆ ಯಶಸ್ಸಿಯಾಗಿ ನಡೆಸಲಾಗಿದ್ದು, 2ನೇ ಹಂತದ ಯಾತ್ರೆಯನ್ನು ವಿಧನಸಭಾ ಕ್ಷೇತ್ರವಾರು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

 

ಪ್ರಜಾಧ್ವನಿ ಯಾತ್ರೆಯಲ್ಲಿ ಘೋಷಿಸಿದ ಯೋಜನೆಗಳನ್ನುಮನೆ ಮನೆಗೆ ತಿಳಿಸಲಾಗುವುದು, ಇನ್ನು ಅನೇಕ ಯೋಜನೆಗಳನ್ನು ಘೋಷಿಸಲಾಗುವುದು, ಇದರಲ್ಲಿ ಜಿಲ್ಲಾವಾರು ಯೋಜನೆಗಳು ಹಂಚಿಕೆಯಾಗಿವೆ. ಜನ ಆಶೀರ್ವಾದ ಮಾಡಿದರೆ ಈ ಎಲ್ಲಾ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತೇವೆ ಎಂದು ಹೇಳಿದರು.