ಮುರುಗೇಶ್ ನಿರಾಣಿ ಒಡೆತನದ ಡಿಸ್ಟಿಲರಿ ಘಟಕದಲ್ಲಿ ಸ್ಪೋಟ: ಓರ್ವ ಸಾವು

ಬಾಗಲಕೋಟೆ: ಸಚಿವ ಮುರುಗೇಶ್ ನಿರಾಣಿ ಒಡೆತನದ ಡಿಸ್ಟಿಲರಿ ಘಟಕದಲ್ಲಿ ಸ್ಪೋಟ ಸಂಭವಿಸಿ ಓರ್ವ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಬಳಿ ನಡೆದಿದೆ.
ಮೃತರನ್ನು ಜುಂಜುರಕೊಪ್ಪಗಲ್ಲಿ ನಿವಾಸಿ ಗುರುನಾಥ ಹುಚ್ಚಣ್ಣನವರ್ ಎಂದು ಗುರುತಿಸಲಾಗಿದೆ. ನಾಲ್ವರಿಗೆ ಗಾಯಗಳಾಗಿದ್ದು, ಅವರನ್ನು ಮುಧೋಳ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಮುಧೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.