ಒಂದೇ ತಿಂಗಳಲ್ಲಿ 6,085 ಕೋಟಿ GST ಸಂಗ್ರಹ -CM ಬೊಮ್ಮಾಯಿ

ಬೆಂಗಳೂರು: ಜನವರಿ ಒಂದೇ ತಿಂಗಳಲ್ಲಿ 6085 ಕೋಟಿ ರೂ. ಜಿಎಸ್‌ಟಿ ಸಂಗ್ರಹ ಮಾಡಿ ರಾಜ್ಯ ದಾಖಲೆ ಬರೆದಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ಶೇ.30 ರಷ್ಟು ಅತ್ಯಧಿಕ ಬೆಳವಣಿಗೆ ಪ್ರಮಾಣ ಹೊಂದಿರುವ ರಾಜ್ಯವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ ತಿಳಿಸಿದ್ದಾರೆ.
ತೆರಿಗೆ ಸಂಗ್ರಹದಲ್ಲಿ ಸುಧಾರಣೆ, ಹೆಚ್ಚಿನ ಕಣ್ಗಾವಲು, ಆರ್ಥಿಕತೆಯಲ್ಲಿ ಚೇತರಿಕೆ ಹಾಗೂ ತೆರಿಗೆದಾರರಲ್ಲಿ ಹೆಚ್ಚಿರುವ ಅನುಸರಣೆಯಿಂದಾಗಿ ಈ ಗಮನಾರ್ಹ ಸಾಧನೆ ಮಾಡಲು ಸಾಧ್ಯವಾಗಿದೆ. ಸರ್ಕಾರ ಈ ವರ್ಷ ಉತ್ತಮ ಆಯವ್ಯಯ ಮಂಡಿಸಲು ಅನುವು ಮಾಡಿಕೊಡಲಿದೆ ಎಂದಿದ್ದಾರೆ.