Belagavi News In Kannada | News Belgaum

ಇದೊಂದು ಚುನಾವಣೆ ಗಿಮಿಕ್‌ ಬಜೆಟ್: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸರ್ಕಾರ ಮಂಡನೆ ಮಾಡಿದ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದ್ದು, ಇದೊಂದು ಚುನಾವಣೆ ಗಿಮಿಕ್‌ ಬಜೆಟ್ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ವ್ಯಂಗ್ಯವಾಡಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರಕಾರದ ಈ ಭಾರಿಯ ಕೊನೆಯ ಬಜೆಟ್ ಮಂಡನೆ ಮಾಡಲಾಗಿದ್ದು, ಇದು ರಾಜ್ಯದ ಜನರ ನಿರೀಕ್ಷೆಯಂತೆಯೆ ಬಜೆಟ್ ಮಂಡನೆ ಮಾಡಿಲ್ಲ. ಅದರಲ್ಲೂ ಉತ್ತರ ಕರ್ನಾಟಕಕ್ಕೆ ಯಾವುದೇ ರೀತಿ ಈ ಬಜೆಟ್‌ ಅನುಕೂಲಕರವಾಗಿಲ್ಲ. ಇದೊಂದು ನಿರಾಶಾದಾಯಕ ಬಜೆಟ್‌ ಆಗಿದೆ ಎಂದರು.

ಬಿಜೆಪಿ ಸರ್ಕಾರ ರಾಜ್ಯವನ್ನು ಸಾಲದ ಹೊರೆಯಲ್ಲಿ ಮುಳುಗಿಸಿದೆ. ಇದು ಡಬ್ಬಲ್ ಇಂಜಿನ್ ಸರಕಾರವಲ್ಲ, ಡಬ್ಬಾ ಸರಕಾರ ಎಂದ ಅವರು, ಹಿಂದಿನ ಚುನಾವಣೆಯಲ್ಲಿ ಡಬ್ಬಲ್ ಇಂಜಿನ್ ಸರಕಾರ ಬಂದರೆ ಕರ್ನಾಟಕದಲ್ಲಿ ಸ್ವರ್ಗ ನಿರ್ಮಾಣವಾಗುತ್ತದೆ ಎಂದು ಹೇಳುತ್ತಿದ್ದರು. ಆದರೆ ಈ ಬಜೆಟ್ ನೋಡಿದರೆ ಡಬ್ಬಲ್ ಇಂಜಿನ್ ಸರಕಾರ ಅಲ್ಲ, ಇದು ಡಬ್ಬಾ ಸರಕಾರವಾಗಿದೆ ಎಂದು ವ್ಯಂಗವಾಡಿದರು.////