ಬಜೆಟ್ ಮಂಡನೆ: ಕಿವಿ ಮೇಲೆ ಹೂ ಇಟ್ಟುಕೊಂಡ ಕೈ ನಾಯಕರು

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆಯ ದಿನ ಕಾಂಗ್ರೆಸ್ ನಾಯಕರು ಕಿವಿ ಮೇಲೆ ಚೆಂಡು ಹೂ ಇಟ್ಟುಕೊಂಡು ಸದನ ಪ್ರವೇಶಿಸಿದ್ದು ವಿಶೇಷವಾಗಿತ್ತು.
ಕೇಸರಿ ಬಣ್ಣದ ಹೂವು ಇಟ್ಟುಕೊಂಡು ಸದನಕ್ಕೆ ಬಂದಿದ್ದರಿಂದ ಕೆಲಹೊತ್ತು ಕಲಾಪದಲ್ಲಿ ಗದ್ದಲ ಉಂಟಾಯಿತು. ಸಿದ್ಧರಾಮಯ್ಯ ಅವರು ಕಿವಿ ಮೇಲೆ ಹೂವುಇಟ್ಟುಕೊಂಡು ಬಂದಿದ್ದಕ್ಕೆ ಸಚಿವ ಅಶೋಕ ಆಕ್ಷೇಪ ವ್ಯಕ್ತಪಡಿಸಿದರು.
ಈ ವೇಳೆ ಸಿಎಂ ಬೊಮ್ಮಾಯಿ ಅವರು, ಇಷ್ಟು ದಿನ ಅವರು ಜನರ ಕಿವಿ ಮೇಲೆ ಹೂ ಇಟ್ಟಿದ್ದರು. ಈಗ ಅವರೇ ಕಿವಿ ಮೇಲೆ ಹೂವು ಇಟ್ಟುಕೊಂಡಿದ್ದಾರೆ. ಮುಂದೆ ಜನ ಇವರ ಕಿವಿ ಮೇಲೆ ಹೂ ಇಡುತ್ತಾರೆ ಎಂದು ಛೇಡಿಸಿದರು.
ಬೊಮ್ಮಾಯಿ ಮಾತಿಗೆ ಗರಂ ಆದ ಸಿದ್ದರಾಮಯ್ಯ, ನೀವು ಜನರ ಕಿವಿ ಮೇಲೆ ಹೂವಿಡುತ್ತಿದ್ದೀರಿ. ಈ ಬಜೆಟ್ ಮೂಲಕ ಇವರು 7 ಕೋಟಿ ಜನರ ಕಿವಿ ಮೇಲೆ ಹೂ ಇಡುತ್ತಿದ್ದಾರೆ ಎಂದು ತಿಳಿಸಲು ನಾವು ಹೂ ಇಟ್ಟುಕೊಂಡು ಬಂದಿದ್ದೇವೆ ಎಂದು ಸರ್ಕಾರದ ವಿರುದ್ಧ ಸಿಟ್ಟು ಹೊರ ಹಾಕಿದರು.
ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕರು ಭಾರೀ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಕಾಂಗ್ರೆಸ್ ನಾಯಕರು ತಿರುಗೇಟು ನೀಡಿದ್ದರಿಂದ ಬಜೆಟ್ ಮಂಡನೆಗೂ ಮೊದಲೇ ಗದ್ದಲ ಉಂಟಾಯಿತು.
ಈ ಸಂದರ್ಭದಲ್ಲಿ ಸ್ಪೀಕರರ್ ಕಾಗೇರಿ, ಇಷ್ಟುದಿನ ಸಿದ್ದರಾಮಯ್ಯ ಕೇಸರಿ ಬಣ್ಣ ನಿಮ್ಮ ಪಕ್ಷದ್ದು ಎನ್ನುತ್ತಿದ್ದರು. ಆದರೆ ಇಂದು ಇಂದು ಕೇಸರಿ ಬಣ್ಣದ ಹೂ ಇಟ್ಟುಕೊಂಡು ಬಂದಿದ್ದಾರೆ ಎಂದು ಹೇಳಿ ಕಾಲೆಳೆದರು. ಕೊನೆಗೆ ಸ್ಪೀಕರ್ ಎರಡೂ ಕಡೆಯ ಸದಸ್ಯರನ್ನು ಸಮಾಧಾನ ಪಡಿಸಿ ಬಜೆಟ್ ಮಂಡನೆಗೆ ಅವಕಾಶ ಕಲ್ಪಿಸಿದರು./////