ಉದ್ಯಾನ ಕಾಮಗಾರಿಗೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸರಸ್ವತಿ ನಗರದಲ್ಲಿ ನೂತನ ಉದ್ಯಾನ ನಿರ್ಮಾಣಕ್ಕಾಗಿ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ 65.57 ಲಕ್ಷ ರೂ,ಗಳು ಬಿಡುಗಡೆಯಾಗಿದ್ದು, ಉದ್ಯಾನ ನಿರ್ಮಾಣದ ಕಾಮಗಾರಿಗಳಿಗೆ ಗುರುವಾರ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಚಾಲನೆಯನ್ನು ನೀಡಿದರು.
ಈ ಕಾರ್ಯಕ್ರಮದಲ್ಲಿ ಸ್ಥಳೀಯ ನಿವಾಸಿಗಳು, ಪ್ರತಾಪ ಶಿಂಧೆ, ಬಿ ಡಿ ಬಿರಾದಾರಾ, ಕೆ ಎಸ್ ತೇಲಿ, ವಿಠ್ಠಲ ರಾಮನೆ, ಹಳಿಂಗಳಿ, ಅನೇಕ ಮಹಿಳೆಯರು ಉಪಸ್ಥಿತರಿದ್ದರು.