ಪ್ರಕಟಣೆ

ವಿ.ಟಿ.ಯು 22 ನೇ ಘಟಿಕೋತ್ಸವ
ಬೆಳಗಾವಿ, ಫೆ.23: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 22 ನೇ ಘಟಿಕೋತ್ಸವ ಶುಕ್ರವಾರ (ಫೆ.24) ಬೆಳಿಗ್ಗೆ 11.40 ಗಂಟೆಗೆ ವಿಟಿಯು ಜ್ಞಾನ ಸಂಗಮ ಆವರಣದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ನಡೆಯಲಿದೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ 22 ನೇ ಘಟಿಕೋತ್ಸವದಲ್ಲಿ ಗೌರವಾನ್ವಿತ ರಾಜ್ಯಪಾಲರು, ವಿಶ್ವವಿದ್ಯಾಲಯಗಳ ಕುಲಾಧಿಪತಿಗಳಾದ ಥಾವರಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ನವದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ (ಎಐಸಿಟಿಇ) ಅಧ್ಯಕ್ಷರಾದ ಪೆÇ್ರ. ಟಿ.ಜಿ ಸೀತಾರಾಮ್ ಅವರು ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ.
ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಡಾ.ಸಿ.ಎನ್.ಅಶ್ವತ್ ನಾರಾಯಣ್ ಅವರು ಉಪಸ್ಥಿತರಿರಲಿದ್ದಾರೆ.////
ನಿರುದ್ಯೋಗಿಗಳಿಗೆ ಸ್ವ ಉದ್ಯೋಗ ತರಬೇತಿ
ಬೆಳಗಾವಿ, ಫೆ.23: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಬೆಳಗಾವಿ ವತಿಯಿಂದ ನಗರದ ಗ್ರಾಮೀಣ ಪ್ರದೇಶದ ಯುವಕ, ಯುವತಿಯರಿಗೆ ಮತ್ತು ನಿರುದ್ಯೋಗಿಗಳಿಗೆ ಕಂಪ್ಯೂಟರ್ ಹಾರ್ಡವೇರ್ ಮತ್ತು ನೆಟವರ್ಕಿಂಗ್ ಕೋರ್ಸುಗಳ 45 ದಿನಗಳ ತರಬೇತಿಯನ್ನು ಮಾರ್ಚ ಎರಡನೇ ವಾರದಲ್ಲಿ ಹಮ್ಮಿಕೊಳ್ಳಲಾಗಿದೆ.
ತರಬೇತದಾರರಿಗೆ ಇರಬೇಕಾದ ಅರ್ಹತೆಗಳು: 18 ರಿಂದ 45 ವಯಸ್ಸಿನವರಾಗಿರಬೇಕು, ಗ್ರಾಮೀಣ ಪ್ರದೇಶದವರಾಗಿರಬೇಕು ಹಾಗೂ ಃPಐ ಕಾರ್ಡ ಹೊಂದಿರಬೇಕು.
ನೀಡಬೇಕಾದ ದಾಖಲಾತಿಗಳು: ಃPಐ ಕಾರ್ಡ, ಆಧಾರ ಕಾರ್ಡ, ಬ್ಯಾಂಕ ಪಾಸ್ ಬುಕ್, ಭಾವಚಿತ್ರ
ತರಬೇತಿಯಲ್ಲಿ ಊಟ, ವಸತಿ ಸಂಪೂರ್ಣ ಉಚಿತವಾಗಿರುತ್ತದೆ.
ಫೆ.9 2023 ರ ಒಳಗೆ ಆರ್ಜಿಯನ್ನು ಸಂಸ್ಥೆಯ ಆರ್ಜಿ ನಮೂನೆಯಲ್ಲಿ ಅಥವಾ ಬಿಳಿಹಾಳಿಯಲ್ಲಿ ನೇರವಾಗಿ ಕಾರ್ಯಾಲಯಕ್ಕೆ ಪೋಸ್ಟ್ ಮುಖಾಂತರ ಅಥವಾ hಣಣಠಿs://ಜoಛಿs.googಟe.ಛಿom/ಜಿoಡಿms/ಜ/e/1ಈಂIಠಿಕಿಐSಜZಇI9ಟಿಠಿಗಿ5ಜಗಿuಕಿbಜqಈಘಿUಉಛಿ6ಥಿಣ__7ಜಚಿI02ಙಡಿhಥಿvಖSಐಥಿತಿರಿಟಈಜಿಏಂ/vieತಿಜಿoಡಿm?vಛಿ=0&ಛಿ=0&ತಿ=1&ಜಿಟಡಿ=0 ಈ ಗೂಗಲ್ ಪಾರ್ಮ ಲಿಂಕನಲ್ಲಿ ನೀಡಬಹುದು.
ಸಂಸ್ಥೆಯ ವಿಳಾಸ :- ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (ಸಿಬಿ ಆರ್‍ಸೆಟಿ), ಪ್ಲಾಟ ನಂ. ಸಿ ಎ -03 (ಪಾರ್ಟ) ಕಣಬರ್ಗಿ ಇಂಡಸ್ತ್ರಿಯಲ್ ಎರಿಯಾ, ಆಟೋ ನಗರ. ಬೆಳಗಾವಿ – 590015.
ದೂರವಾಣಿ ಸಂಪರ್ಕ ಸಂಖ್ಯೆ 0831-2440644, 8296792166, 9845750043, 8050406866, 8867388906, 9449860564 ಗೆ ಬೆಳಿಗ್ಗೆ 9.30 ರಿಂದ ಸಂಜೆ 6 ವರೆಗೆ ಸಂಪರ್ಕಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.///
ರಾಷ್ಟ್ರೀಯ ಯುವ ಸ್ವಯಂ ಸೇವಕರ ಹುದ್ದೆಗಳ ಅರ್ಜಿ ಆಹ್ವಾನ
ಬೆಳಗಾವಿ, ಫೆ.23: ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಬೆಳಗಾವಿ ಜಿಲ್ಲೆಯ 14 ತಾಲೂಕುಗಳಲ್ಲಿ ತಾಲೂಕಿಗೆ ಇಬ್ಬರಂತೆ ಗೌರವ ಧನ ಆಧಾರದ ಮೇರೆಗೆ ಕೆಲಸ ಮಾಡಲು ಹಾಗೂ ನೆಹರು ಯುವ ಕೇಂದ್ರ ಬೆಳಗಾವಿ ಕಛೇರಿಗೆ ಇಬ್ಬರು ಕಂಪ್ಯೂಟರ್ ಕೆಲಸ ಮಾಡಲು ಬೆಳಗಾವಿ ನಗರದಿಂದ, ರಾಷ್ಟ್ರೀಯ ಯುವ ಸ್ವಯಂ ಸೇವಕರ ಹುದ್ದೆಗೆ ತಾತ್ಕಾಲಿಕವಾಗಿ ಒಂದು ಅಥವಾ ಎರಡು ವರ್ಷದ ಅವಧಿಗೆ ನೇಮಕ ಮಾಡಲು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು: ಎಸ್.ಎಸ್.ಎಲ್.ಸಿ (ಹತ್ತನೇ ತರಗತಿ ಪಾಸ್) ಪಾಸಾಗಿರಬೇಕು, ಏಪ್ರಿಲ್.1 2023 ರಂತೆ 18 ರಿಂದ 29 ವರ್ಷದ ಒಳಗಿನವರಾಗಿರಬೇಕು ಹಾಗೂ ವಿದ್ಯಾರ್ಥಿಗಳು ಅರ್ಜಿ ಹಾಕಲು ಅರ್ಹರಲ್ಲ. ವಿದ್ಯಾರ್ಥಿಗಳು ಅರ್ಜಿ ಹಾಕಿದ್ದಲ್ಲಿ ಅಂತಹ ಅರ್ಜಿಗಳನ್ನು ವಜಾ ಮಾಡಲಾಗುವುದು. ಅಭ್ಯರ್ಥಿಗಳು ವಾಸವಿರುವ ವಿಳಾಸದ ತಾಲೂಕಿಗೆ ಮಾತ್ರ ಅರ್ಜಿ ಸಲ್ಲಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 5000/- ನೀಡಲಾಗುವುದು.
ಶಿಸ್ತಿನಿಂದ ಕೂಡಿದ ಅರ್ಪಣಾ ಮನೋಭಾವದ ಯುವ ಸ್ವಯಂ ಸೇವಕರು ಆರೋಗ್ಯ, ಸಾಕ್ಷರತೆ, ನೈರ್ಮಲ್ಯ, ಯುವಕ/ಯುವತಿ/ಮಹಿಳಾ ಮಂಡಳ ರಚನೆ, ಯುವ ಕಾರ್ಯಕ್ರಮಗಳು, ಹಾಗೂ ಸಾಮಾಜಿಕ ವಿಷಯಗಳ ಬಗ್ಗೆ ಪ್ರಚಾರ ಮಾಡುವ ಕೆಲಸವಿರುತ್ತದೆ. ಈ ಕೆಲಸ ಮಾಡಲು ಇಚ್ಚೆಯುಳ್ಳ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ತಿತಿತಿ.ಟಿಥಿಞs.ಟಿiಛಿ.iಟಿ ವೆಬ್‍ಸೈಟ್ ಮೂಲಕ ಮಾರ್ಚ.9 2023 ರೊಳಗೆ ಅರ್ಜಿಯನ್ನು ಆನ್‍ಲೈನ್ ಮೂಲಕ ಸಲ್ಲಿಸಬೇಕು. ಕಛೇರಿ ವಿಳಾಸ: ಜಿಲ್ಲಾ ಯುವ ಅಧಿಕಾರಿಗಳು, ನೆಹರು ಯುವ ಕೇಂದ್ರ ಅನ್ನಪೂರ್ಣ ನಿಲಯ, ಪಸ್ಟ್ ಕ್ರಾಸ್ ಮಹಾಂತೇಶ ನಗರ, ಬೆಳಗಾವಿ – 590016
ಇದು ಸಂಬಳದ ಉದ್ಯೋಗವಲ್ಲ ಮತ್ತು ಸ್ವಯಂಸೇವಕರಿಗೆ ಸರ್ಕಾರದೊಂದಿಗೆ ಉದ್ಯೋಗ ಪಡೆಯಲು ಯಾವುದೇ ಕಾನೂನುಬದ್ದ ಹಕ್ಕನ್ನು ನೀಡುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0831-2453496 ಅಥವಾ ಮೋ.ಸಂ 9620646488 ಯನ್ನು ಸಂಪರ್ಕಿಸಬಹುದು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////
ಬೈಲಹೊಂಗಲ ನೂತನ ಬಸ್ ನಿಲ್ದಾಣ ಉದ್ಘಾಟಣೆ ಫೆ.24
ಬೆಳಗಾವಿ, ಫೆ.23: ವಾಯುವ್ಯಾ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿ ವಿಭಾಗ
ಬೈಲಹೊಂಗಲ ನೂತನ ಬಸ್ ನಿಲ್ದಾಣದ ಉದ್ಘಾಟನಾ ಸಮಾರಂಭ ಫೆ.24 2023 ರಂದು ಮಧ್ಯಾಹನ 2 ಗಂಟೆಗೆ ಬಸ್ ನಿಲ್ದಾಣದ ಆವರಣ ಬೈಲಹೊಂಗಲ.
ಪ್ರಭು ನೀಲಕಂಠ ಮಹಾಸ್ವಾಮಿಗಳು ದಿವ್ಯ ಸಾನಿದ್ಯ ವಹಿಸಲಿದರೆ, ಜಲ ಸಂಪನ್ಮೂಲಗಳು (ಬಾರಿ ಮತ್ತು ಮಾಧ್ಯಮ ನೀರಾವವಿ) ಸಚಿವರ ಹಾಗೂ ಕರ್ನಾಟಕ ಸರ್ಕಾರ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಎಂ. ಕಾರಜೋಳ ಕಾರ್ಯಕ್ರಮ ಉದ್ಘಾಟಣೆ ಮಾಡಲಿದರೆ,
ಮೂಜರಾಯಿ, ಹಜ್ ಮತ್ತು ವಕ್ಘ್ ಸಚಿವರಾದ ಶಶಿಕಲಾ ಅ. ಜೊಲ್ಲೆ, ಸಾರಿಗೆ ಮತ್ತು ಪರಿಸಿಷ್ಟ ಪಂಗಡದ ಕಲ್ಯಾಣ ಸಚಿವರಾದ ಬಿ. ಶ್ರೀರಾಮಲು ಇವರು ಮುಖ್ಯ ಅಥಿತಿಗಳಾಗಿ ಆಗಮಿಸಲಿದರೆ.
ವಿಧಾನ ಸಭೆ ಶಾಸಕರಾದ ಮಹಾಂತೇಶ ಎಸ್. ಕೌಜಲಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದರೆ.
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಮಹೇಶ ಕುಂಮಠಳಿ, ಕರ್ನಾಟಕ ಆದಿ ಜಾಬಾವ್ ಅಭಿವೃದಿ ನಿಗಮದ ಅಧ್ಯಕ್ಷರಾದ ದುರ್ಯೋಧನ ಎಂ. ಐಹೊಳೆ, ಕರ್ನಾಟಕ ತಾಂಡಾ ಅಭಿವೃಧಿ ನಿಗಮದ ಅಧ್ಯಕ್ಷರಾದ ಪಿ. ರಾಜೀವ ಕಾರ್ಯಕ್ರಮದ ವಿಶೇಷ ಆಮಂತ್ರಿತರು ಆಗಿರುತ್ತಾರೆ.
ವಾ. ಕ. ರ. ಸಾ. ಸಂಸ್ಥೆ, ಕೇಂದ್ರ ಕಚೇರಿ ಅಧ್ಯಕ್ಷರಾದ ಡಾ. ಬಸವರಾಜ ಎಸ್.ಕೆಲಗಾರಿ ಜ್ಯೋತಿ ಬೆಳಗಲಿದ್ದಾರೆ.
ಸಾರಿಗೆ ಇಲ್ಲಾಖೆ ಕಾರ್ಯದರ್ಶಿಗಳಾದ ಡಾ.ಎನ್. ವಿ. ಪ್ರಸಾದ, ಸಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಎಂ.ಜಿ.ಹಿರೇಮಠ,ಉತ್ತರ ವಲಯ ಆರಕ್ಷಕ ಮಹಾನಿರೀಕ್ಷಕರಾದ ಎನ್.ಸತೀಶಕುಮಾರ,ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹರ್ಷಲ್ ಬೋಯರ್, ವಾ.ಕ.ರ.ಸಾ. ಸಂಸ್ಥೆಯ ವ್ಯವಸ್ಥಾಪಕ ನಿರ್ದೆಶಕರಾದ ಭರತ್ ಎಸ್, ಪುರಸಭೆ, ಪಟ್ಟಣ ಪಂಚಾಯತ, ಗ್ರಾಮ ಪಂಚಾಯತ ಅಧ್ಯಕ್ಷರು, ಉಪಧ್ಯಕ್ಷರು, ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರು ಸದಸ್ಯರು ಮತ್ತು ಚುನಾಯಿತ ಪ್ರತಿನಿಧಿಗಳು, ಗಣ್ಯರು ಮತ್ತು ಸಮಸ್ತ ನಾಗರೀಕರು, ಜಿಲ್ಲಾ ಮತ್ತು ತಾಲೂಕ ಮಟ್ಟದ ಎಲ್ಲ ಅಧಿಕಾರಿಗಳು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ.
ವಾ.ಕ.ರ.ಸಾ. ಸಂಸ್ಥೆಯಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಗಣೇಶ ಎಲ್.ರಾಥೋಡ್, ವಾ.ಕ.ರ.ಸಾ. ಸಂಸ್ಥೆಯ ಮುಖ್ಯ ಕಾಮಗಾರಿ ಅಭಿಯಂತಕರಾದ ಪ್ರಕಶ ವ್ಹಿ.ಕಬಾಡಿ ಇವರು ಸ್ವಾಗತ ಕೊರಲಿದ್ದಾರೆ.///
ಪಿಎಂ ಕಾರ್ಯಕ್ರಮ: ಪೂರ್ವಸಿದ್ಧತೆ ಪರಿಶೀಲನಾ ಸಭೆ
ಯಾವುದೇ ಲೋಪದೋಷ ಆಗದಂತೆ ಎಚ್ಚರಿಕೆ ವಹಿಸಲು ಸಚಿವೆ ಶೋಭಾ ಕರಂದ್ಲಾಜೆ ಸೂಚನೆ
ಬೆಳಗಾವಿ, ಫೆ.23: ಮಾನ್ಯ ಪ್ರಧಾನಮಂತ್ರಿಗಳ ಕಾರ್ಯಕ್ರಮದಲ್ಲಿ ಭದ್ರತೆ ಹಾಗೂ ಶಿಷ್ಟಾಚಾರದಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಎಲ್ಲರೂ ಸಮನ್ವಯತೆಯಿಂದ ಕೆಲಸ ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕೃಷಿ ಇಲಾಖೆಯ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಸೂಚನೆ ನೀಡಿದರು.
ಪ್ರಧಾನಮಂತ್ರಿಗಳ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಗುರುವಾರ(ಫೆ.23) ನಡೆದ ಪೂರ್ವಸಿದ್ಧತೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇದಲ್ಲದೇ ಕಾರ್ಯಕ್ರಮದಲ್ಲಿ ಭಾಗವಹಿಸುವ ಫಲಾನುಭವಿಗಳನ್ನು ಸುರಕ್ಷಿತವಾಗಿ ಕರೆತಂದು ವಾಪಸ್ ಕರೆದುಕೊಂಡು ಹೋಗಲು ಅನುಕೂಲವಾಗುವಂತೆ ಸೂಕ್ತ ಸಾರಿಗೆ ವ್ಯವಸ್ಥೆ ಮಾಡಬೇಕು.
ಪ್ರಧಾನಮಂತ್ರಿಗಳು ಸಂಚರಿಸಲಿರುವ ಮಾರ್ಗಗಳಲ್ಲಿ ಅಗತ್ಯವಿರುವ ಕಡೆಗಳಲ್ಲಿ ದುರಸ್ತಿ ಅಥವಾ ನಿರ್ಮಾಣ ಕಾಮಗಾರಿ ನಡೆಸಬೇಕು.
ಜಿಲ್ಲೆಯ ವಿವಿಧ ಭಾಗಗಳಿಂದ ಕಾರ್ಯಕ್ರಮದಲ್ಲಿ ಭಾಗವಹಿಸುವ ಫಲಾನುಭವಿಗಳು, ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು, ಗುಣಮಟ್ಟದ ಊಟವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿಯೊಂದು ಸ್ಥಳಗಳಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳ ತಂಡವನ್ನು ನಿಯೋಜಿಸಬೇಕು.
ಗಣ್ಯರು ಮಾತ್ರವಲ್ಲದೇ ಸಾರ್ವಜನಿಕರಿಗೂ ಅನುಕೂಲವಾಗುವಂತೆ ತುರ್ತು ವೈದ್ಯಕೀಯ ಸೌಲಭ್ಯ ಒದಗಿಸಲು ವೈದ್ಯಕೀಯ ತಂಡಗಳು ಮತ್ತು ಆ್ಯಂಬ್ಯುಲೆನ್ಸ್ ಗಳನ್ನು ನಿಯೋಜಿಸಬೇಕು.
ಎಸ್.ಪಿ.ಜಿ. ತಂಡ ಬಂದ ನಂತರ ಕೂಲಂಕುಷವಾಗಿ ಚರ್ಚಿಸಿ ಕಾರ್ಯಕ್ರಮದ ಅಂತಿಮ ರೂಪುರೇಷೆಗಳನ್ನು ನಿರ್ಧರಿಸಬೇಕು.
ಸಾವಯವ ಮತ್ತು ಸಿರಿಧಾನ್ಯಗಳ ಪ್ರದರ್ಶನವನ್ನು ಕೂಡ ಏರ್ಪಡಿಸುವ ಕುರಿತು ಚರ್ಚಿಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಚಿವರಾದ ಶೋಭಾ ಕರಂದ್ಲಾಜೆ ತಿಳಿಸಿದರು.
ಕಾರ್ಯಕ್ರಮದ ಸಿದ್ಧತೆಗಳ ಕುರಿತು ಮಾಹಿತಿಯನ್ನು ನೀಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಈಗಾಗಲೇ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಎಸ್.ಪಿ.ಜಿ. ಅಧಿಕಾರಿಗಳ ತಂಡ ಬಂದ ನಂತರವೇ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದರು.
ಸಾರಿಗೆ ವ್ಯವಸ್ಥೆ, ವೇದಿಕೆ ನಿರ್ಮಾಣ, ಪಾರ್ಕಿಂಗ್ ಮತ್ತಿತರ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದು ಹೇಳಿದರು.
ಜಲಜೀವನ ಮಿಷನ್ ಐದು ಬಹುಗ್ರಾಮ ಕುಡಿಯುವ ನೀರು ಯೋಜನೆಯ 1100 ಕೋಟಿ ವೆಚ್ಚದ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.
ಪ್ರಧಾನಮಂತ್ರಿ ಸಂಚರಿಸಲಿರುವ ಮಾರ್ಗಗಳ ದುರಸ್ತಿ, ಸ್ವಚ್ಛತೆ, ಸೌಂದರ್ಯೀಕರಣ ಕೆಲಸ ಮಾಡಲಾಗುತ್ತಿದೆ.
ಅಂದಾಜು ಒಂದು ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ. ಕಾರ್ಯಕ್ರಮ ಸ್ಥಳದಲ್ಲಿ ಕೂಡ ಯಾವುದೇ ತೊಂದರೆಯಾಗದಂತೆ ಆಸನ ವ್ಯವಸ್ಥೆ, ಕುಡಿಯುವ ನೀರು, ಎಲ್.ಇ.ಡಿ. ಪರದೆಗಳು, ಅಂತರ್ಜಾಲ ಸಂಪರ್ಕ ಮತ್ತಿತರ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಶಾಸಕ ಅಭಯ್ ಪಾಟೀಲ ಮಾತನಾಡಿ, ಇಡೀ ದೇಶದ ವೇಷಭೂಷಣಗಳನ್ನು ಧರಿಸಿದ ಮಹಿಳಾ ತಂಡಗಳನ್ನು ಕಾರ್ಯಕ್ರಮದಲ್ಲಿ ನಿಯೋಜಿಸುವುದು ಸೇರಿದಂತೆ ರಾಷ್ಟ್ರಪುರುಷರನ್ನು ಸ್ಮರಿಸುವ ರೀತಿಯಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
ಇದಲ್ಲದೇ ಸುಮಾರು ಹತ್ತು ಸಾವಿರ ಮಹಿಳೆಯರಿಗೆ ಪೇಟವನ್ನು ತೊಡಿಸುವ ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಮೆರಗು ತರಲಾಗುವುದು ಎಂದರು.
ಸಾವಿರಾರು ಜನರು ಏಕಕಾಲಕ್ಕೆ ಊಟಕ್ಕೆ ಆಗಮಿಸುವುದರಿಂದ ಊಟದ ಕೌಂಟರ್ ಸ್ಥಾಪಿಸಬೇಕು ಎಂದು ಸಲಹೆ ನೀಡಿದರು.
ಪ್ರಧಾನಮಂತ್ರಿ ಸಂಚರಿಸುವ ಮಾರ್ಗದಲ್ಲಿ ಭದ್ರತೆ ಹಾಗೂ ಬ್ಯಾರಿಕೇಡಿಂಗ್ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಬೇಕು. ಯಾವುದೇ ಲೋಪದೋಷ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಪ್ರಾದೇಶಿಕ ಆಯುಕ್ತರಾದ ಎಂ.ಜಿ.ಹಿರೇಮಠ ಹೇಳಿದರು.
ಸಂಸದರಾದ ಮಂಗಲ ಅಂಗಡಿ, ಅಣ್ಣಾಸಾಹೇಬ್ ಜೊಲ್ಲೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ್ ಪಾಟೀಲ, ಅನಿಲ್ ಬೆನಕೆ, ಪೆÇಲೀಸ್ ಆಯುಕ್ತರಾದ ಡಾ.ಎಂ.ಬಿ.ಬೋರಲಿಂಗಯ್ಯ ಉಪಸ್ಥಿತರಿದ್ದರು.
ರೈಲ್ವೆ, ಕೃಷಿ, ಗ್ರಾಮೀಣಾಭಿವೃದ್ಧಿ ಸೇರಿದಂತೆ ಎಲ್ಲ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.///
ಪ್ರಧಾನಮಂತ್ರಿ ಕಾರ್ಯಕ್ರಮ: ಪೂರ್ವ ಸಿದ್ಧತೆ ಪರಿಶೀಲನೆ ಬೆಳಗಾವಿ,
ರೈತರ ಖಾತೆಗೆ ಕಿಸಾನ್ ಸಮ್ಮಾನ್ ನಿಧಿ: ಸಚಿವೆ ಶೋಭಾ ಕರಂದ್ಲಾಜೆ
ಫೆ ಇದೇ ಫೆ.27 ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಾನ್ಯ ಪ್ರಧಾನಮಂತ್ರಿಗಳು ಕಿಸಾನ್ ಸಮ್ಮಾನ್ ನಿಧಿಯನ್ನು ನೇರವಾಗಿ ರೈತರ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ ಎಂದು ಕೃಷಿ ಇಲಾಖೆಯ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಹೇಳಿದರು.
ಮಾನ್ಯ ಪ್ರಧಾನಮಂತ್ರಿಗಳ ಕಾರ್ಯಕ್ರಮ ನಡೆಯಲಿರುವ ಬಿ.ಎಸ್.ಯಡಿಯೂರಪ್ಪ ಮಾರ್ಗದಲ್ಲಿರುವ ಮಾಲಿನಿ ಸಿಟಿಯಲ್ಲಿ ವೇದಿಕೆ ನಿರ್ಮಾಣ ಮತ್ತಿತರ ಸಿದ್ಧತೆಗಳನ್ನು ಗುರುವಾರ(ಫೆ.23) ಪರಿಶೀಲಿಸಿ ಅವರು ಮಾತನಾಡಿದರು.
ಇದು ಸಂಪೂರ್ಣ ರೈತರ ಕಾರ್ಯಕ್ರಮವಾಗಿದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹಾಗೂ ವಿಶೇಷವಾಗಿ ರೈತ ಮಹಿಳೆಯರನ್ನು ಸೇರಿಸಲಾಗುವುದು ಎಂದು ತಿಳಿಸಿದರು.
ಮೊದಲ ಬಾರಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯನ್ನು ಬೆಳಗಾವಿಯ ಕಾರ್ಯಕ್ರಮದಲ್ಲಿ ರೈತರ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ.
ರೋಡ್ ಶೋ ಮಾರ್ಗ ಇನ್ನೂ ಅಂತಿಮಗೊಂಡಿಲ್ಲ; ಎಸ್.ಪಿ.ಜಿ. ಅಧಿಕಾರಿಗಳ ಜತೆ ಚರ್ಚಿಸಿ ನಿರ್ಧರಿಸಲಾಗುವುದು.
ಪಿಎಂ-ಕಿಸಾನ್ ರೈತರ ಯೋಜನೆಯಾಗಿದೆ. ಕೃಷಿಯಲ್ಲಿ ರೈತ ಮಹಿಖೆಯರ ಪಾತ್ರ ದೊಡ್ಡದು. ಆದ್ದರಿಂದ ರೈತ ಮಹಿಳೆಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಲಾಗುವುದು ಎಂದು ಕರಂದ್ಲಾಜೆ ತಿಳಿಸಿದರು.
ಕಾರ್ಯಕ್ರಮದ ಸಿದ್ಧತೆ ಹಾಗೂ ವೇದಿಕೆ ನಿರ್ಮಾಣದ ಕುರಿತು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ವಿವರಿಸಿದರು.
ನಾಲ್ಕೂ ದಿಕ್ಕಿನಲ್ಲಿ ಊಟ ಹಾಗೂ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ.
ಪ್ರಾದೇಶಿಕ ಆಯುಕ್ತರಾದ ಎಂ.ಜಿ.ಹಿರೇಮಠ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ್ ಪಾಟೀಲ, ಅನಿಲ್ ಬೆನಕೆ, ಪೆÇಲೀಸ್ ಆಯುಕ್ತರಾದ ಡಾ.ಎಂ.ಬಿ.ಬೋರಲಿಂಗಯ್ಯ, ಮಹಾನಗರ ಪಾಲಿಕೆಯ ಆಯುಕ್ತರಾದ ರುದ್ರೇಶ್ ಘಾಳಿ ಮತ್ತಿತರರು ಉಪಸ್ಥಿತರಿದ್ದರು.////