Belagavi News In Kannada | News Belgaum

ಭಾರತ್ ರೈಲಿಗೆ ಕಲ್ಲುತೂರಾಟ

ಬೆಂಗಳೂರು: ಇತ್ತೀಚೆಗೆ ಆರಂಭವಾಗಿದ್ದ ವಂದೇ ಭಾರತ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.

 

ಮೈಸೂರು-ಚೆನ್ನೈ ವಂದೇ ಭಾರತ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಆರ್ ಪುರಂ-ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣದ ಬಳಿ ನಡೆದಿದೆ. ಘಟನೆಯಲ್ಲಿ ರೈಲಿನ ಎರಡು ಗಾಜುಗಳಿಗೆ ಹಾನಿಯಾಗಿದ್ದು, ಪ್ರಯಾಣಿಕರು ಗಾಯಗೊಂಡಿದ್ದಾರೆ.

 

ಆರೋಪಿಗಳ ಬಂಧನಕ್ಕಾಗಿ ರೈಲ್ವೆ ಪೊಲೀಸರು ಬಲೆ ಬೀಸಿದ್ದಾರೆ. ಇಲಾಖೆಗೆ ಸಂಬಂಧಿಸಿದ ವಸ್ತುಗಳಿಗೆ ಹಾನಿಯುಂಟು ಮಾಡಿದರೆ ಅಂತವರ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಲಾಗುವುದು ಎಂದು ಬೆಂಗಳೂರು ರೈಲ್ವೆ ವಿಭಾಗ ಎಚ್ಚರಿಕೆ ನೀಡಿದೆ.