Belagavi News In Kannada | News Belgaum

ಆರೋಪ ಹೊತ್ತ ಭ್ರಷ್ಟ ಬಿಜೆಪಿ ಶಾಸಕರ ವಿರುದ್ಧ ಆಪ್ ಆಕ್ರೋಶ

ಬೆಳಗಾವಿ: ಬೆಳಗಾವಿಯಲ್ಲಿರುವ ಕೆಲ ಬಿಜೆಪಿ ನಾಯಕರು ತಮ್ಮ ವೈಯಕ್ತಿಕ ವರ್ಚಸ್ಸು ತೋರಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದಲ್ಲಿ ವೆಚ್ಚ ಮಾಡುತ್ತಿದ್ದಾರೆ. ತುರ್ಕಿ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಹಾಯ ಮಾಡುತ್ತಿರುವುದು ಸ್ವಾಗತ. ಆದರೆ ಬೆಳಗಾವಿಯಲ್ಲಿ ನೆರೆ ಹಾವಳಿಯಿಂದ ತತ್ತರಿಸಿದ ಜನರಿಗೆ ಪರಿಹಾರ ನೀಡದೇ ಇರುವುದು ದುರ್ದೈವದ ಸಂಗತಿ ಎಂದು ಆಮ್ ಆದ್ಮಿ ಮುಖಂಡ ರಾಜಕುಮಾರ ಟೋಪಣ್ಣವರ ಕಿಡಿಕಾರಿದ್ದಾರೆ.
ಬಿಜೆಪಿಯ ರಾಷ್ಟ್ರೀಯ ನಾಯಕರು ಭ್ರಷ್ಟಾಚಾರ ‌ಮುಕ್ತ ಆಡಳಿತ ನೀಡುವುದಾಗಿ ಹೇಳುತ್ತಾರೆ. ಆದರೆ ಪ್ರಧಾನಿ ನರೇಂದ್ರ ‌ಮೋದಿ ಅವರು ಭ್ರಷ್ಟಾಚಾರ ಎಂದಿಗೂ ಸಹಿಸುವುದಿಲ್ಲ. ಬೆಳಗಾವಿ ಬಿಜೆಪಿ ಕೆಲ  ಶಾಸಕರ ಮೇಲೆ ಭ್ರಷ್ಟಾಚಾರದ ಪ್ರಕರಣ ಇದೆ.  ಇದನ್ನು ಸ್ವಾಗತಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರೋ ಎನ್ನುವುದನ್ನು ಸ್ಪಷ್ಟಪಡಿಸಬೇಕು.
ನಾನು ತಿನ್ನುವುದಿಲ್ಲ. ಮತ್ತೊಬ್ಬರಿಗೂ ತಿನ್ನಲು ಬಿಡುವುದಿಲ್ಲ ಎನ್ನುವ ಮೋದಿ ನಾಳೆ ಬಿಜೆಪಿ  ನಡೆಸಿರುವ ಭ್ರಷ್ಟಾಚಾರದ ಬಗ್ಗೆ ಪ್ರಸ್ತಾಪಿಸುತ್ತಾರೆಯೇ.. ? ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂಥ ಭ್ರಷ್ಟಾಚಾರ ‌ನಡೆಸಿದ ಶಾಸಕರಿಗೆ ಕ್ರಮ ಕೈಗೊಳ್ಳದೆ ಇರುವುದು ಅವರ ರಕ್ಷಣೆ ನಿಂತಿದ್ದಾರೆ ಎನ್ನುವ ಅನುಮಾನ ಬೆಳಗಾವಿ ಜನರಲ್ಲಿ ಕಾಡುತ್ತಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರೇ ಉತ್ತರಿಸಬೇಕು ಎಂದು ಟೋಪಣ್ಣವರ ಆಗ್ರಹಿಸಿದ್ದಾರೆ.
/////