Belagavi News In Kannada | News Belgaum

ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣವಂತರಾಗಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಮೂಡಲಗಿ: ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಿಕ್ಷಣ ಸಂಸ್ಥೆಗಳು ಶಿಸ್ತು ಬದ್ದ, ಗುಣಮಟ್ಟದ ಶಿಕ್ಷಣ ನೀಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.

ತಾಲೂಕಿನ ಸಂಗನಕೇರಿ ಗ್ರಾಮದ ಗುಡ್ ಶೆಪರ್ಡ್ ಪೂರ್ವ ಪ್ರಾಥಮಿಕ ಶಾಲೆಯ ನೂತನ ಶಾಲಾ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು, ಇಂದು ಪಾಲಕರು ವಿದೇಶಿ ಶಿಕ್ಷಣ ವ್ಯವಸ್ಥೆಗೆ ವಾಲುತ್ತಿದ್ದಾರೆ. ಇದನ್ನು ತಡೆಗಟ್ಟಲು ದೇಶಿಯ ಶಿಕ್ಷಣ ಸಂಸ್ಥೆಗಳು ಮುಂದಾಗಬೇಕೆಂದು ಸಲಹೆ ನೀಡಿದರು.

ಶಿಕ್ಷಣವೂ ಪ್ರತಿಯೊಬ್ಬರ ಹಕ್ಕಾಗಿದೆ, ಎಲ್ಲ ವರ್ಗದ ಜನರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವತ್ತ ಗಮನ ಹರಿಸಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲ ವರ್ಗದವರು ಶಿಕ್ಷಣವಂತರಾಗಿ ತಮ್ಮ ಮಕ್ಕಳ ಹಾಗೂ ದೇಶದ ಪ್ರಗತಿಗೆ ಶ್ರಮಿಸಬೇಕು ಎಂದ ಅವರು, ಮಕ್ಕಳಲ್ಲಿ ಹುದುಗಿರುವ ಪ್ರತಿಭೆಯನ್ನು ಶಿಕ್ಷಕರು ಹೊರ ಹಾಕಬೇಕೆಂದು ತಿಳಿಸಿದರು.

 

ಈ ಸಂದರ್ಭದಲ್ಲಿ ಯುವ ನಾಯಕ ಸರ್ವೋತಮ್ಮ ಜಾರಕಿಹೊಳಿ, ಸಾತಪ್ಪ ಚಿಕ್ಕೋಡಿ, ಕುಮಾರ್ ಮೆದೆದ್ದವರ್, ಭೀಮಶಿ ಸಂಪಗಾವಿ, ಅಬ್ದುಲ್ ಮಕಾಂದರ್ ಸೇರಿದಂತೆ ಸಂಗನಕೇರಿ ಗ್ರಾಮದ ಮುಖಂಡರು, ಸಾರ್ವಜನಿಕರು  ಉಪಸ್ಥಿತರಿದ್ದರು.///////