Belagavi News In Kannada | News Belgaum

ಸಿಲಿಂಡರ್ ಸ್ಫೋಟದಿಂದ 13 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ನಡೆದಿದೆ

ಬೆಂಗಳೂರು: ಸಿಲಿಂಡರ್ ಸ್ಫೋಟದಿಂದ 13 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಬೆಂಗಳೂರಿನ ಹೆಬ್ಬಾಳ ಸಮೀಪದ ಗುಡ್ಡದಹಳ್ಳಿಯಲ್ಲಿ ನಡೆದಿದೆ.
ಮಹೇಶ್ (13) ಮೃತಪಟ್ಟ ಬಾಲಕ. ಸಿಲಿಂಡರ್ ಫಿಲ್ಲಿಂಗ್ ಅಂಗಡಿಯ ಪಕ್ಕದಲ್ಲಿ ಮಹೇಶ್ ನಿಂತಿದ್ದ. ಈ ವೇಳೆ ಅಕ್ರಮವಾಗಿ ಗ್ಯಾಸ್ ರೀ ಫಿಲ್ಲಿಂಗ್ ಮಾಡಲಾಗುತ್ತಿತ್ತು. ಇದರಿಂದಾಗಿ ಸಿಲಿಂಡರ್‌ ಬ್ಲಾಸ್ಟ್ ಆಗಿದೆ.
ಪರಿಣಾಮ ಅಂಗಡಿಯ ಪಕ್ಕದಲ್ಲಿದ್ದ ಮಹೇಶ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಘಟನೆ ವೇಳೆ ತಕ್ಷಣ ಮಹೇಶ್‍ನನ್ನು ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲು ಮಾಡಲು ಕರೆದೊಯ್ಯಲಾಗುತ್ತಿತ್ತು. ಆದರೆ ಮಹೇಶ್ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ.