ಬಿಜೆಪಿ ತೊರೆದು ಕೈ ಹಿಡಿಯಲು ಮುಂದಾದ ಮಾಜಿ ಶಾಸಕ

ಚಾಮರಾಜನಗರ: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿಆಡಳಿತಾರೂಢ ಬಿಜೆಪಿ ಹಳೆ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿದ್ದು, ಆದರೆ ಈ ಭಾಗದಲ್ಲಿರುವ ಬಿಜೆಪಿಯ ನಾಯಕರು ಒಬ್ಬರಿಂದೊಬ್ಬರು ಪಕ್ಷ ತೊರೆಯುತ್ತಿದ್ದಾರೆ.
ಮೊನ್ನೇ ಅಷ್ಟೇ ವಿಧಾನ ಪರಿಷತ್ ಸದಸ್ಯ ಸಂದೇಶ ನಾಗರಾಜ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಚಾಮರಾಜನಗರದಲ್ಲಿ ಮತ್ತೋರ್ವ ಮಾಜಿ ಶಾಸಕ ಬಿಜೆಪಿ ತೊರೆದು ಕೈ ಹಿಡಿಯಲು ಮುಂದಾಗಿದ್ದಾರೆ. ಕೊಳ್ಳೇಗಾಲ ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ಬಿಜೆಪಿ ಪಕ್ಷದ ಪ್ರಾಥಾಮಿಕ ಸದಸ್ಯ ಸ್ಥಾನಕ್ಕೆ ಹಾಗೂ ರಾಜ್ಯ ಎಸ್ ಸಿ ಮೋರ್ಚಾ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ನಾಳೆ(ಮಾ.07) ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಇದರಿಂದ ಚುನಾವಣೆ ಹೊತ್ತಲ್ಲೇ ಬಿಜೆಪಿ ಶಾಕ್ ಕೊಟ್ಟಿದ್ದಾರೆ.
ಇನ್ನು ಈ ಬಗ್ಗೆ ಚಾಮರಾಜನಗರದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ನಂಜುಂಡಸ್ವಾಮಿ, ಭಾರತೀಯ ಜನತಾ ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣ ಇತ್ತು. ನನಗೆ ಹಾಗೂ ನನ್ನ ಬೆಂಬಲಿಗರ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲೂ ನನ್ನನ್ನು ಕಡೆಗಣಿಸಲಾಯಿತು. ಪಕ್ಷದ ವರಿಷ್ಠರ ಗಮನಕ್ಕೆ ತಂದರೂ ಸರಿಪಡಿಸುವ ಕೆಲಸ ಆಗಲಿಲ್ಲ. ಈ ಎಲ್ಲಾ ಬೆಳವಣಿಗೆಗಳಿಂದ ಬೇಸತ್ತು ರಾಜೀನಾಮೆ ನೀಡಿದ್ದೇನೆ. ಯಾವುದೇ ಷರತ್ತಿಲ್ಲದೆ ನಾಳೆ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು./////