ಬಿಜೆಪಿಯಿಂದ ಹೋಗುವವರನ್ನು ಗೌರವಯುತವಾಗಿ ಕಳುಹಿಸಿಕೊಡುತ್ತೇವೆ: ಬಿಎಸ್‌ವೈ

ಬೆಳಗಾವಿ: ಕಾಂಗ್ರೆಸ್‌ನಿಂದ ಬಿಜೆಪಿ ಬರುವವರಿಗೆ ಸ್ವಾಗತ, ಹೋಗುವವರನ್ನು ಗೌರವಯುತವಾಗಿ ಕಳುಹಿಸಿಕೊಡುತ್ತೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.
ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೋಮಣ್ಣನವರು ಪಕ್ಷ ಬಿಡುತ್ತಾರೆ ಎನ್ನುವುದರಲ್ಲಿ ಸತ್ಯಾಂಶ ಇಲ್ಲ. ಇಲ್ಲಿಂದ ಹೋದ ಮೇಲೆ ಸೋಮಣ್ಣ ಅವರನ್ನು ಕರೆದು ಮಾತಾಡುತ್ತೇನೆ. ಆ ರೀತಿಯ ಯಾವ ಭಿನ್ನಾಭಿಪ್ರಾಯವೂ ಇಲ್ಲ. ಎಲ್ಲರೂ ಒಟ್ಟಾಗಿದ್ದೇವೆ ಎಂದರು.
ವಿ ಸೋಮಣ್ಣ, ಡಿಕೆ ಶಿವಕುಮಾರ್ ಭೇಟಿಯಾಗಿದ್ದಾರೆ ಎಂಬ ವಿಚಾರಕ್ಕೆ ಉತ್ತರಿಸಿದ ಅವರು, ಡಿಕೆ ಶಿವಕುಮಾರ್ ಅವರು ಎಲ್ಲರನ್ನೂ ಕರೆದು ಮಾತನಾಡುವುದು ನಿರಂತರವಾಗಿ ಮಾಡುತ್ತಿದ್ದಾರೆ. ಆ ರೀತಿ ಯಾವುದಕ್ಕೂ ನಮ್ಮ ಮುಖಂಡರು ಬೆಲೆ ಕೊಡುತ್ತಿಲ್ಲ. ಯಾರೂ ಸಹ ಅವರ ಮಾತಿಗೆ ಬಲಿಯಾಗುವುದಿಲ್ಲ. ಕಾಂಗ್ರೆಸ್‌ನಿಂದ ಬರುವವರಿಗೆ ಸ್ವಾಗತ, ಹೋಗುವವರನ್ನು ಗೌರವಯುತವಾಗಿ ಕಳುಹಿಸಿಕೊಡುತ್ತೇವೆ. 17 ಜನರಲ್ಲೂ ಯಾರೊಬ್ಬರೂ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.//////