Belagavi News In Kannada | News Belgaum

ಮಹೇಶ ಕುಮಠಳ್ಳಿಗೆ ಟಿಕೆಟ್ ಸಿಗದಿದ್ದರೆ ನಾನೂ ಸ್ಪರ್ಧಿಸಲ್ಲ ಎಂದ ರಮೇಶ್ ಜಾರಕಿಹೊಳಿ

ವಿಜಯಪುರ: ಅಥಣಿ ಶಾಸಕ ಮಹೇಶ್ ಕುಮಠಳ್ಳಿಗೆ ಟಿಕೆಟ್ ನೀಡಬೇಕು. ಇಲ್ಲದೇ ಹೋದರೆ ನಾನು ಕೂಡಾ ಗೋಕಾಕ್‌ನಿಂದ ಸ್ಪರ್ಧಿಸುವುದಿಲ್ಲ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ 13 ಸ್ಥಾನಗಳಲ್ಲಿ ಬಿಜೆಪಿ ಗೆದ್ದಿದೆ. ಈ ಬಾರಿ ಇನ್ನೂ 2 ಸ್ಥಾನ ಹೆಚ್ಚಿಗೆ ಗೆಲ್ಲಿಸುವ ಪ್ರಯತ್ನ ಮಾಡುತ್ತೇವೆ ಎಂದರು.

ಸಚಿವ ನಾರಾಯಣಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಗೆ  ಈಗ ಹೋಗಿ ಏನು ಮಾಡುವುದು? ಬಿಜೆಪಿ ತತ್ವ ಸಿದ್ಧಾಂತ ನಂಬಿ ಕಾಂಗ್ರೆಸ್ ಬಿಟ್ಟು ಬಂದಿದ್ದೇನೆ. ಇನ್ನು ಬಿಜೆಪಿ ದೊಡ್ಡ ಪ್ರವಾಹ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿಯನ್ನು ಕೊಂಡಾಡುತ್ತಿದ್ದಾರೆ ಎಂದು ಹೇಳಿದರು.