Belagavi News In Kannada | News Belgaum

ತೋಟಗಾರಿಕೆ ತರಬೇತಿಗಾಗಿ ಅರ್ಜಿ ಅಹ್ವಾನ

 

ಬೆಳಗಾವಿ, ಮಾ.10: ತೋಟಗಾರಿಕೆ ಇಲಾಖೆಯ ವತಿಯಿಂದ ತೋಟಗಾರಿಕೆ ಪ್ರಾಯೋಗಿಕ ತರಬೇತಿ ಯೋಜನೆಯಡಿಯಲ್ಲಿ 2023-24 ನೇ ಸಾಲಿನಲ್ಲಿ ಬೆಳಗಾವಿ ಜಿಲ್ಲೆಯ ಅಭ್ಯರ್ಥಿಗಳಿಗೆ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಡ್ಯಾಂ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಮೇ.2 2023 ರಿಂದ ಫೆ.29 2024 ರ ವರೆಗೆ 10 ತಿಂಗಳ ತೋಟಗಾರಿಕೆ ತರಬೇತಿಗಾಗಿ ಅರ್ಜಿ ಅಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಉತ್ತೀರ್ಣರಾಗಿರಬೇಕು, ತರಬೇತಿ ಬಯಸುವ ಅಭ್ಯರ್ಥಿಯ ತಂದೆ/ತಾಯಿ/ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು ಹಾಗೂ ಈ ಬಗ್ಗೆ ಪಹಣ ಯನ್ನು (ಖಖಿಅ) ನೀಡುವುದು ಕಡ್ಡಾಯವಾಗಿರುತ್ತದೆ.
ಸಾಮಾನ್ಯ ವರ್ಗದ ಅಭ್ಯರ್ಥಿಗೆ ಕನಿಷ್ಠ ವಯೋಮಿತಿ 18 ವರ್ಷ ಹಾಗೂ ಗರಿಷ್ಠ 30 ವರ್ಷಗಳು. ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷಗಳು ಹಾಗೂ ಗರಿಷ್ಠ 33 ವರ್ಷಗಳು.
ಅರ್ಜಿಗಳನ್ನು ಮಾ.11 2023 ರಿಂದ ಏ.12 2023 ರ ವರೆಗೆ ತೋಟಗಾರಿಕೆ ಉಪನಿರ್ದೇಶಕರು (ಜಿ.ಪಂ) ಬೆಳಗಾವಿ/ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ) ಬೆಳಗಾವಿ ರವರ ಕಛೇರಿಯಲ್ಲಿ ಅಥವಾ ಇಲಾಖೆಯ ವೆಬ್‍ಸೈಟ್            https://horticulturedir.karnataka.gov.in/  ನಲ್ಲಿ ಡೌನಲೋಡ ಮಾಡಿಕೊಳ್ಳಬಹುದು.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏ.12 2023 ರ ಸಂಜೆ 5 ಗಂಟೆಯ ವರೆಗೆ ನಿಗಧಿಪಡಿಸಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ), ರಾಣ ಚನ್ನಮ್ಮ ವೃತ್ತ, ಬೆಳಗಾವಿ ರವರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ಎಲ್ಲ ಅಭ್ಯರ್ಥಿಗಳು ಏ.15 2023 ರಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ) ಬೆಳಗಾವಿ ರವರ ಕಛೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ನೇರವಾಗಿ ಮೂಲ ದಾಖಲಾತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಹಾಗೂ ಈ ಸಂಬಂಧವಾಗಿ ಈ ಕಛೇರಿಯಿಂದ ಮತ್ತೆ ಯಾವುದೇ ಪತ್ರ ವ್ಯವಹಾರ ಮಾಡಲಾಗುವುದಿಲ್ಲ. ಈ ಕುರಿತು ದೂರವಾಣ ಸಂಖ್ಯೆ 0831-2451422 ಮತ್ತು ಹಿಡಕಲ್ ಡ್ಯಾಂ ತರಬೇತಿ ಕೇಂದ್ರz ದೂರವಾಣ ಸಂಖ್ಯೆ 08333-263008 ಕ್ಕೆ ಸಂಪರ್ಕಿಸಿ ವಿಚಾರಿಸಬಹುದು.
ಹಾಗೂ ಹೆಚ್ಚಿನ ವಿವರಗಳಿಗೆ ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ರವರ ಕಛೇರಿಯಲ್ಲಿ ವಿಚಾರಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.