ಅಕ್ರಮ ಪಡಿತರ ಅಕ್ಕಿ ಸಾಗಾಟ: ಕ್ರಮ ಕೈಗೊಳ್ಳುವಂತೆ ಮನವಿ

ಬೆಳಗಾವಿ : ಅಕ್ರಮ ಪಡಿತರ ಅಕ್ಕಿ ಸಾಗಾಟ ಮಾಡುತ್ತಿರುವವರ ವಿರುದ್ಧ ಕ್ರಮಜರುಗಿಸುವಂತೆ ಆಗ್ರಹಿಸಿ ಕರ್ನಾಟಕ ಭೀಮ ರಕ್ಷಕ ಸಂಘಟನೆ ವತಿಯಿಂದ ಶನಿವಾರ ಜಿಲ್ಲಾಡಳಿತ್ಕಕೆ ಮನವಿ ಸಲ್ಲಿಸಲಾಯಿತು.
ರಾಜ್ಯಾಧ್ಯಕ್ಷ ಈಶ್ವರ ಗುಡಜ್ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಸರ್ಕಾರ ನೀಡುವ ಪಡಿತರ ಅಕ್ಕಿಯನ್ನು ಗ್ರಾಮಸ್ಥರಿಗೆ ದುಡ್ಡಿನ ಆಮಿಷ ಒಡ್ಡಿ ಕಡಿಮೆ ಬೆಲೆಯಲ್ಲಿ ಖರೀದಿ ಮಾಡಿ ದುಪ್ಪಟ್ಟು ಬೆಲೆಗೆ ನೆರೆಯ ಮಹಾರಾಷ್ಟ್ರಕ್ಕೆ ಸಾಗಿಸುವ ತಂಡವೊಂದು ಸದ್ದಿಲ್ಲದೆ ಕೆಲಸ ಮಾಡುತ್ತಿದೆ. ಇದನ್ನು, ಅರಿತ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮೌನ ಸಮ್ಮತಿಯಂತೆ ಸುಮ್ಮನೆ ಕುಳಿತಿರುವುದು ಕಳವಳಕಾರಿ ಸಂಗತಿಯಾಗಿದೆ ಕೂಡಲೇ ಜಿಲ್ಲಾಧಿಕಾರಿಗಳು ಮದ್ಯ ಪ್ರವೇಶ ಮಾಡಿ ಪೋಲಿಸ್ ಇಲಾಖೆಗೆ ಜವಾಬ್ದಾರಿ ನೀಡಿ ಯಮಕನಮರಡಿ ಚೆಕ್ ಪೋಸ್ಟ್ ನಲ್ಲಿ ಪ್ರತ್ಯೇಕ ಚೆಕ್ ಪೋಸ್ಟ್ ನಿರ್ಮಾಣ ಮಾಡಿದರೆ.
ಇಂತಹ ಕಿಡಿಗೇಡಿತನ್ನಗಳನ್ನು ತಡೆಯಲು ಅನುಕೂಲ ಆಗುತ್ತದೆ ಹಾಗೂ ಸರ್ಕಾರದ ಯೋಜನೆ ಪೌಷ್ಟಿಕಾಹಾರ ಹಾಗೂ ಹಸಿವು ಮುಕ್ತ ರಾಜ್ಯ ಮಾಡಲು ಅನುಕೂಲವಾಗುತ್ತದೆ ಎಂದು ಹಳಿದರು.
ಈ ಸಂದರ್ಭದಲ್ಲಿ ಅಶೋಕ ಗಾಡಿವಡ್ಡರ ಜೀಯಾವುಲ್ಲಾ ವಂಟಮೂರಿ ರೆಹಮಾನ್ ಮೊಕಾಶಿ ವೆಂಕಟೇಶ ಪಾಂಡ್ರೆ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು