Belagavi News In Kannada | News Belgaum

ಶಾರ್ಟ್ ಸರ್ಕ್ಯೂಟ್‌ನಿಂದ ಗುಡಿಸಲಿಗೆ ಬೆಂಕಿ: ಐವರು ಸಜೀವ ದಹನ

ಲಕ್ನೋ: ಗುಡಿಸಿಲಿಗೆ ಬೆಂಕಿ ಬಿದ್ದ ಪರಿಣಾಮ ದಂಪತಿ  ಹಾಗೂ ಅವರ ಮೂರು ಮಕ್ಕಳು ಬೆಂಕಿಗೆ ಆಹುತಿಯಾದ ಘಟನೆ ಭಾನುವಾರ ಮುಂಜಾನೆ ಉತ್ತರ ಪ್ರದೇಶದ ಹರಾಮೌನಲ್ಲಿ  ನಡೆದಿದೆ.

ಮೃತರನ್ನು ಸತೀಶ್ (27), ಆತನ ಪತ್ನಿ ಕಾಜಲ್ (24), ಮಕ್ಕಳಾದ ಸನ್ನಿ (7), ಸಂದೀಪ್ (4), ಗುಡಿಯಾ (2) ಎಂದು ಕಾನ್ಪುರದ ಪೊಲೀಸ್ ವರಿಷ್ಠಾಧಿಕಾರಿ ಬಿಬಿಜಿಟಿಎಸ್ ಮೂರ್ತಿ ತಿಳಿಸಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಮುಂಜಾನೆ ಅವಘಡ ನಡೆಯುವಾಗ ಎಲ್ಲರೂ ನಿದ್ರೆಗೆ ಜಾರಿದ್ದರು. ಬೆಂಕಿ ಹೊತ್ತಿಕೊಂಡಿದ್ದು ಗಮನಕ್ಕೆ ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಮಹಿಳೆಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.//////