Belagavi News In Kannada | News Belgaum

ಬಿಜೆಪಿ ಬಿಟ್ಟು ದೇವೇಗೌಡ ಸಮ್ಮುಖದಲ್ಲಿ ಜೆಡಿಎಸ್‌ ಸೇರಿದ ಮಾಜಿ ಸಚಿವ

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಇರುವಾಗ ಪಕ್ಷಾಂತರ ಪರ್ವವೇ ನಡೆಯುತ್ತಿದೆ. ಮಾಜಿ ಸಚಿವ, ಬಿಜೆಪಿ ನಾಯಕ ಬಿಜೆಪಿ ಬಿಟ್ಟು ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಸಮ್ಮುಖದಲ್ಲಿ ಪಕ್ಷ ಸೇರಿದ್ದಾರೆ.

ರಾಜಕೀಯ ಜೀವನದಲ್ಲಿ ದೇವೇಗೌಡರ ಕುಟುಂಬವನ್ನು ವಿರೋಧಿಸಿಕೊಂಡೇ ಬಂದ ಮಾಜಿ ಸಚಿವ ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಈ ಬಾರಿಯ ಚುನಾವಣೆಗೆ ಜೆಡಿಎಸ್‌ ಅಭ್ಯರ್ಥಿ.

ಬಿಡದಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತೋಟದ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಅರಕಲಗೂಡು ಮಂಜು (ಎ. ಮಂಜು) ಬಿಜೆಪಿ ಬಿಟ್ಟು ಜೆಡಿಎಸ್ ಸೇರಿದರು. ಜೆಡಿಎಸ್ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸೇರಿದಂತೆ ವಿವಿಧ ನಾಯಕರು ಈ ಸಂದರ್ಭದಲ್ಲಿಉಪಸ್ಥಿತರಿದ್ದರು. ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎ. ಟಿ. ರಾಮಸ್ವಾಮಿ ಪಕ್ಷ ತೊರೆಯಲಿದ್ದಾರೆ.

ರಾಜಕೀಯ ಜೀವನದ ಆರಂಭದಿಂದಲೇ ಹಾಸನ ಜಿಲ್ಲೆಯಲ್ಲಿ ಎಚ್. ಡಿ. ದೇವೇಗೌಡರ ಕುಟುಂಬವನ್ನು ವಿರೋಧಿಸಿಕೊಂಡು ಬಂದ ಎ. ಮಂಜು ಈಗ ಜೆಡಿಎಸ್ ಅಭ್ಯರ್ಥಿ. ಹಾಸನದಲ್ಲಿ ಎಚ್. ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಪಂಚರತ್ನ ರಥಯಾತ್ರೆಗೆ ದಿನಾಂಕ ನಿಗದಿಯಾಗಿದೆ. ಮಾರ್ಚ್ 16ರಂದು ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಯಾತ್ರೆ ನಡೆಯಲಿದೆ. ಈ ರಥಯಾತ್ರೆಯ ಮೂಲಕವೇ ಕ್ಷೇತ್ರದಲ್ಲಿ ಜೆಡಿಎಸ್‌ನ ಚುನಾವಣಾ ಪ್ರಚಾರ ಆರಂಭವಾಗಲಿದೆ./////