ಮಕ್ಕಳಿಗೆ ಅತ್ಯುನ್ನತ ಗುಣಮಟ್ಟದ ಶಿಕ್ಷಣದ ಜತೆಗೆ ಭವಿಷ್ಯ ರೂಪಿಸಿಕೊಳ್ಳಲು ಸಹಾಯಕವಾಗುವ ಶೈಕ್ಷಣಿಕ ತರಬೇತಿ ಕಾರ್ಯಾಗಳ ಅವಶ್ಯಕತೆ : ಜಿಲ್ಲಾ ಯೋಜನಾಧಿಕಾರಿ ಪ್ರದೀಪ ಜಿ.ಶೆಟ್ಟಿ

ಬೈಲಹೊಂಗಲ- ತಂತ್ರಜ್ಞಾನದ ನಾಗಾಲೋಟದ ಇಂದಿನ ದಿನಗಳಲ್ಲಿ ಮಕ್ಕಳಿಗೆ ಅತ್ಯುನ್ನತ ಗುಣಮಟ್ಟದ ಶಿಕ್ಷಣದ ಜತೆಗೆ ಭವಿಷ್ಯ ರೂಪಿಸಿಕೊಳ್ಳಲು ಸಹಾಯಕವಾಗುವ ಶೈಕ್ಷಣಿಕ ತರಬೇತಿ ಕಾರ್ಯಾಗಳ ಅವಶ್ಯಕತೆ ಇದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಬೆಳಗಾವಿ ಜಿಲ್ಲಾ ಯೋಜನಾಧಿಕಾರಿ ಪ್ರದೀಪ ಜಿ.ಶೆಟ್ಟಿ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭೀವೃದ್ಧಿ ಯೋಜನೆ ಬಿ.ಸಿ.ಟ್ರಷ್ಟ್ ಬೈಲಹೊಂಗಲ ಇವರ ಆಶ್ರಯದಲ್ಲಿ ತಾಲೂಕಿನ ದೊಡವಾಡ ಗ್ರಾಮದ ಶ್ರೀ ವೀರಭದ್ರೇಶ್ವರ ಗುರುಕುಲ ಪ್ರೌಢಶಾಲೆಯ ಎಸ್ಸೆಎಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕಳೆದ ಮೂರು ತಿಂಗಳಿಂದ ವಿಶೇಷ ಟ್ಯೂಷನ್ ಕ್ಲಾಸ್ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗ್ಗಡೆಜಿಯವರ ಮಾರ್ಗದರ್ಶನದಲ್ಲಿ ಕರ್ನಾಟಕ ರಾಜ್ಯಾದ್ಯಾಂತ ಆಯ್ದ ಸರಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಎಲ್ಲ ಕಡೆ ವಿದ್ಯಾರ್ಥಿ ಶಿಕ್ಷಕರಿಂದ ಈ ಕಾರ್ಯಕ್ರಮಕ್ಕೆ ಮೆಚ್ಚುಗೆ ಸಹಿತ ಉತ್ತಮ ಪ್ರತಿಕ್ರಿಯೆಗಳು ಬಂದಿವೆ. ಇದಲ್ಲದೆ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್, ನೋಟ್ ಬುಕ್ಸ್, ಉನ್ನತ ಶಿಕ್ಷಣಕ್ಕೆ ಸಾಲ ಸೌಲಭ್ಯ, ಸರಕಾರಿ ಶಾಲೆಗಳಿಗೆ ಶಿಕ್ಷಕರ ನಿಯೋಜನೆ ಸೇರಿದಂತೆ ರಾಜ್ಯ ಸರಾಕರದೊಂದಿಗೆ ಕೈಜೋಡಿಸಿ ರಾಜ್ಯದಲ್ಲಿ ಶಿಕ್ಷಣ ಕೇತ್ರಕ್ಕೆ ಗ್ರಾಮಾಭಿವೃದ್ಧ್ಧಿಯಿಂದ ಅಪಾರ ಕೊಡುಗೆ ನೀಡಲಾಗುತ್ತಿದೆ ಎಂದರು.
ಮುಖ್ಯಾಧ್ಯಾಪಕಿ ಬಿ.ಆರ್.ಹುತಮಲ್ಲನವರ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಾಲೂಕು ಯೋಜಾಧಿಕಾರಿ ವಿಜಯಕುಮಾರ, ಗ್ರಾಪಂ ಉಪಾಧ್ಯಕ್ಷ ಉಳವಪ್ಪ ಬಶೆಟ್ಟಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಅಂಜಲಿ ಯಕ್ಸಂಬಿ, ಸಂಘದ ಪ್ರತಿನಿಧಿಗಳಾದ ಗಂಗಮ್ಮ ಉಜನಿಮಠ, ಅನುಸೂಯಾ ಸಪ್ಪಡ್ಲಿ, ಅನ್ನಪೂರ್ಣ ಧಾರವಾಡ ಇದ್ದರು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಇದೇ ವೇಳೆ ಪ್ರೋತ್ಸಾಹಿತ ಬಹುಮಾನ ವಿತರಿಸಲಾಯಿತು. ಶಿಕ್ಷಕ ರಮೇಶ ಜೇಡರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.