Belagavi News In Kannada | News Belgaum

ನಗರದ ವಿವಿಧ ಪ್ರದೇಶಗಳಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ಶಾಸಕ ಅನಿಲ ಬೆನಕೆ

ಬೆಳಗಾವಿ ನಗರದ ವಿವಿಧ ಪ್ರದೇಶಗಳಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಅನಿಲ ಬೆನಕೆ :
ಬೆಳಗಾವಿ 13 :ದಿನಾಂಕ 13.03.2023 ರಂದು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ರವರು ನಗರದ ಪಾರ್ವತಿ ಕಾಲೋನಿ, ಗಡ್ಡೆ ಕಾಲೊನಿ, ಭಾರತ ಕಾಲೋನಿ ಹಾಗೂ ವೃಂದಾವನ ಕಾಲೋನಿಯ ರಹವಾಸಿಗಳ ಬೇಡಿಕೆಯಂತೆ ಮಹಾನಗರ ಪಾಲಿಕೆಯ ಅನುದಾನದಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಭೂಮಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕಾಮಗಾರಿಗಳಿಗೆ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದ ಅವರು ಮಹಾನಗರ ಪಾಲಿಕೆಯ ರೂ. 2 ಕೋಟಿ 50 ಲಕ್ಷಗಳ ವೆಚ್ಚದಲ್ಲಿ ಬೆಳಗಾವಿ ನಗರದ ಪಾರ್ವತಿ ಕಾಲೋನಿಯಲ್ಲಿ ರಸ್ತೆ ಮತ್ತು ಚರಂಡಿ, ಗಡ್ಡೆ ಕಾಲೋನಿಯಲ್ಲಿ ಚರಂಡಿ ನಿರ್ಮಾಣ, ಭಾರತ ಕಾಲೊನಿಯಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಸೇರಿದಂತೆ ವೃಂದಾವನ ಕಾಲೋನಿಯಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲು ಭೂಮಿ ಪೂಜೆ ಸಲ್ಲಿಸಲಾಗಿದೆ ಎಂದರು.

ಗುತ್ತಿಗೆದಾರರು ತ್ವರಿತಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರ ಅನುಕೂಲಕ್ಕೆ ನೀಡಬೇಕೆಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರೊಂದಿಗೆ ನಗರ ಸೇವಕರು, ಮಹಾನಗರ ಪಾಲಿಕೆ ಅಧಿಕಾರಿಗಳು, ಮುಖಂಡರುಗಳು, ಪ್ರಮುಖ ಕಾರ್ಯಕರ್ತರು, ರಹವಾಸಿಗಳು ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು.