ಸಿ.ಟಿ ರವಿ ವಿರುದ್ಧ ಕಿಡಿಕಾರಿದ ವೀರಶೈವ ಲಿಂಗಾಯತರು: ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ

ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ಚುನಾವಣೆ ಪ್ರಚಾರ ಭರಾಟೆ ಶುರುವಾಗಿದೆ.
ಈ ನಡುವೆಯೇ ಚಿಕ್ಕಮಗಳೂರಿನಲ್ಲಿ ವೀರಶೈವ ಲಿಂಗಾಯತರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವಿರುದ್ಧ ತಿರುಗಿಬಿದ್ದಿದ್ದಾರೆ.
ಇದೀಗ ರಾಜ್ಯ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ, ಸಿಟಿ ರವಿ ವಿರುದ್ಧ ಸಂಘಟನಾ ವೇದಿಕೆಯಲ್ಲಿ ಸಿ.ಟಿ ರವಿ ಕಿಡಿಕಾರಿದ್ದಾರೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ಹೇಳಿಕೆಗೆ ಟಾಂಗ್ ಕೊಡುತ್ತಿರುವುದಕ್ಕೆ ವೀರಶೈವ ಲಿಂಗಾಯುತ ಸಂಘಟನೆ ಕೋಪಗೊಂಡಿದ್ದಾರೆ.
ಸಿ. ಟಿ ರವಿ ಚುನಾವಣೆ ಪ್ರಚಾರದಲ್ಲಿ ಕಂಡು ಬಂದರೆ ಮುತ್ತಿಗೆ ಹಾಕಬೇಕು. ಕಿತ್ತೋದ ಸಿ.ಟಿ ರವಿ ಎಂದು ಘೋಷಣೆ ಕೂಗಬೇಕು ಪತ್ರಿಕಾ ಪ್ರಕಟಣೆ ಮೂಲಕ ಕರೆ ಕೊಟ್ಟಿದೆ.ಅಲ್ಲದೇ ಲಿಂಗಾಯತ ಸಮಾಜಕ್ಕೆ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಒಂದು ವಾರದಲ್ಲಿ ನಿಮ್ಮ ಮನೆಗೆ ಬಂದು ಹೋರಾಟ ಮಾಡುತ್ತೇವೆ ಎಂದು ಸಿಟಿ ರವಿಗೆ ಎಚ್ಚರಿಕೆ ನೀಡಿದೆ.//////