Belagavi News In Kannada | News Belgaum

ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಬೇಸಗೆಯ ಬಿಸಿಯ ನಡುವೆಯೇ ರಾಜ್ಯದಲ್ಲಿ ಗುರವಾರ ಮಳೆಯಾಗಿದೆ. ನಿಪ್ಪಾಣಿ, ರಾಯಭಾಗ, ಸಕಲೇಶಪುರ ಸೇರಿದಂತೆ ಹಲವು ಸ್ಥಳಗಳಲ್ಲಿ ವರುಣ ಸಿಂಚನವಾಗಿದೆ. ಅದಕ್ಕೆ ಪೂರಕವಾಗಿ ಮುಂದಿನ 24 ಗಂಟೆಗಳಲ್ಲಿ ಕರಾವಳಿ ಸೇರಿದಂತೆ ಕೆಲವೆಡೆ ಗುಡುಗಿನಿಂದ ಕೂಡಿದ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ಬಾಗಲಕೋಟೆ, ಬೀದರ್‌ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಕಲಬುರಗಿಯಲ್ಲಿ ಅತಿ ಹೆಚ್ಚಿನ ಅಂದರೆ 37 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿ ಮತ್ತು ಇತರ ಪ್ರದೇಶಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ./////