‘ಅಪ್ಪು ಸದಾ ಅಜರಾಮರ’ : ಪುನೀತ್ ನೆನೆದು ‘ಸಿಎಂ ಬೊಮ್ಮಾಯಿ’ ಟ್ವೀಟ್

ಬೆಂಗಳೂರು : ಅಪ್ಪು ಸದಾ ಅಜರಾಮರ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡುವ ಮೂಲಕ ಪುನೀತ್ ರಾಜ್ ಕುಮಾರ್ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ ಅತಿ ಚಿಕ್ಕ ವಯಸ್ಸಿನಲ್ಲಿಯೇ ಅಗಾಧವಾದ ಸಾಧನೆಗೈದು, ಎಲ್ಲರಿಗೂ ಮಾದರಿಯಾಗಿರುವ ಪ್ರೀತಿಯ ಅಪ್ಪು, ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಜನ್ಮಸ್ಮರಣೆಯಂದು ಗೌರವಪೂರ್ವಕ ನಮನಗಳು.
ಅಪ್ಪು ಸದಾ ಅಜರಾಮರ ಎಂದು ಟ್ವೀಟ್ ಮಾಡಿದ್ದಾರೆ. ಕರ್ನಾಟಕದ ರಾಜರತ್ನ ಎಂದೇ ಖ್ಯಾತರಾಗಿದ್ದ ನಟ ಪುನೀತ್ ರಾಜ್ಕುಮಾರ್ ನಮ್ಮನ್ನಗಲಿ ಒಂದೂವರೆ ವರ್ಷ ಕಳೆದಿದೆ.ಪುನೀತ್ ಇಂದು ನಮ್ಮೊಂದಿಗಿದ್ದಿದ್ದರೆ 48ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಆದ್ರೆ ವಿಧಿಯಾಟದಿಂದಾಗಿ ಅವರಿಂದು ನಮ್ಮೊಂದಿಗಿಲ್ಲ. ಹಾಗಾಗಿ ಅಭಿಮಾನಿಗಳೇ ತಮ್ಮ ಮೆಚ್ಚಿನ ನಟನ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸುತ್ತಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ಸಮಾಧಿ ಬಳಿ ಪುನೀತ್ ಹುಟ್ಟು ಹಬ್ಬ ಆಚರಣೆ ಮಾಡಲಾಗುತ್ತಿದೆ.
ಅಪ್ಪು.ನೀನು ಹುಟ್ಟಿದಾಗ ನಮ್ಮ ಮನೆಯಲ್ಲಿ ಸಂತೋಷ ಉಕ್ಕಿ ಹರಿಯುತ್ತಿತ್ತು. ನೀನು ನಕ್ಕರೆ ಎಲ್ಲರೂ ನಗುತ್ತಿದ್ದರು. ನೀನು ಕುಣಿದರೆ ಎಲ್ಲರೂ ರೋಮಾಂಚನದಿಂದ ನಗುತ್ತಿದ್ದರು, . ಮಿಂಚಿನಂತೆ ತೆರೆಯ ಮೇಲೆ ಬಂದು ಹೆಮ್ಮರವಾಗಿ, ಕೋಟ್ಯಾಂತರ ಜನರಿಗೆ ನೆರಳಾಗಿದ್ದನ್ನು ಹತ್ತಿರದಿಂದ ನೋಡಿದ ನಾನೇ ಪುನೀತ. ಎಂದು ಶಿವರಾಜ್ ಕುಮಾರ್ ಹೇಳಿದ್ದಾರೆ.
ನೀನು ಹುಟ್ಟಿದ್ದೇ ಒಂದು ಉತ್ಸವ. ನೀನು ಬೆಳೆದಿದ್ದು ಇತಿಹಾಸ, ನಿನ್ನ ಜೀವನ ಒಂದು ದಂತಕಥೆ. ನಿನ್ನ ನೆನಪುಗಳು ಎಂದಿಗೂ ಅಮರ. ಹುಟ್ಟುಹಬ್ಬದ ಶುಭಾಶಯಗಳು ಅಪ್ಪು ಎಂದು ನಟ ಶಿವರಾಜ್ ಕುಮಾರ್ ಪೋಸ್ಟ್ ಹಂಚಿಕೊಂಡಿದ್ದಾರೆ.