Belagavi News In Kannada | News Belgaum

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ. ಮಾ.20 ರಂದು 11ನೇ ವಾರ್ಷಿಕ ಘಟಿಕೋತ್ಸವ

ಬೆಳಗಾವಿ, ಮಾ.18 : ರಾಣ ಚನ್ನಮ್ಮ ವಿಶ್ವವಿದ್ಯಾಲಯದ 11 ನೇ ಘಟಿಕೋತ್ಸವ ಸೋಮವಾರ (ಮಾ.20) ರಂದು ಮುಂಜಾನೆ 11 ಗಂಟೆಗೆ ಸುವರ್ಣ ವಿಧಾನ ಸೌಧದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಘಟಿಕೋತ್ಸವದಲ್ಲಿ ಒಟ್ಟು 47,185 ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಪದವಿಯನ್ನು ಪಡೆದುಕೊಳ್ಳಲಿದ್ದಾರೆ. ಸ್ನಾತಕೋತ್ತರ ಹಾಗೂ ಸ್ನಾತಕ ವಿದ್ಯಾರ್ಥಿಗಳಿಗೆ 11 ಸ್ವರ್ಣ ಪದಕಗಳನ್ನು ನೀಡಲಾಗುವುದು. 27 ಪಿಹೆಚ್.ಡಿ. ಪದವಿಗಳನ್ನು ಪ್ರದಾನ ಮಾಡಲಾಗುವುದು ಎಂದು ರಾಣ ಚನ್ನಮ್ಮ ವಿಶ್ವ ವಿದ್ಯಾಲಯದ ಕುಲಪತಿಗಳಾದ ಪ್ರೋ. ರಾಮಚಂದ್ರಗೌಡ ಅವರು ತಿಳಿಸಿದರು.
ನಗರದ ವಾರ್ತಾ ಭವನದಲ್ಲಿ ಶನಿವಾರ(ಮಾ.18) ನಡೆದ ರಾಣ ಚನ್ನಮ್ಮ ವಿಶ್ವವಿದ್ಯಾಲಯದ 11 ನೇ ಘಟಿಕೋತ್ಸವದ ಕುರಿತು ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.
ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ರಾಜ್ಯದ ಗೌರವಾನ್ವಿತ ಕುಲಾಧಿಪತಿಗಳು ಹಾಗೂ ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಲೋಟ್ ಅವರು ವಹಿಸಲಿದ್ದಾರೆ. ಸಹಕುಲಾಧಿಪತಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಉಪಸ್ಥಿತರಿರುವರು. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಉಪಾಧ್ಯಕ್ಷರಾದ ಪ್ರೊ. ಬಿ. ತಿಮ್ಮೇಗೌಡ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.
ರಾಣ ಚನ್ನಮ್ಮ ವಿಶ್ವವಿದ್ಯಾಲಯ ವ್ಯಾಪ್ತಿ ಮತ್ತು ಗಾತ್ರದಲ್ಲಿ ರಾಜ್ಯದಲ್ಲಿಯೇ ಮಹತ್ವ ಸ್ಥಾನವನ್ನು ಪಡೆದುಕೊಂಡಿದೆ. ವಿಶ್ವವಿದ್ಯಾಲಯವು ಕಳೆದ ವರ್ಷ ನ್ಯಾಕ್ ಮನ್ನಣೆಯಲ್ಲಿ ಉನ್ನತ ಶ್ರೇಣ ಯನ್ನು ಪಡೆದುಕೊಂಡಿದೆ. ಇ-ಆಡಳಿತ ವ್ಯವಸ್ಥೆ ಜಾರಿಯಲ್ಲ್ಲಿ ರಾಜ್ಯದಲ್ಲಿಯೇ ಮುಂಚೂಣ ಯಲ್ಲಿದೆ ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿ-2020ನ್ನು ಕಳೆದೆರಡು ವರ್ಷಗಳಿಂದ ಅನುಷ್ಠಾನಗೊಳಿಸಿದೆ ಎಂದು ಹೇಳಿದರು.
ವಿಶ್ವವಿದ್ಯಾಲಯಕ್ಕೆ ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ 419 ಮಹಾವಿದ್ಯಾಲಯಗಳು ವಿಶ್ವವಿದ್ಯಾಲಯದ ಅಧೀನದಲ್ಲಿ ಸಂಯೋಜನೆಗೊಂಡಿವೆ. ಸುಮಾರು 1.50 ಲಕ್ಷ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ವಿಜಯಪುರ ಮತ್ತು ಜಮಖಂಡಿಯಲ್ಲಿ ಸ್ನಾತಕೋತ್ತರ ಕೇಂದ್ರಗಳನ್ನು, ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆಘಟಕ ಮಹಾವಿದ್ಯಾಲಯವನ್ನು ವಿಶ್ವವಿದ್ಯಾಲಯವು ಹೊಂದಿದ್ದು, ಅಲ್ಲದೆ 49 ಕಾಲೇಜುಗಳಲ್ಲಿ ಸ್ನಾತಕೋತ್ತರ ಕೇಂದ್ರಗಳಲ್ಲಿ ಉನ್ನತ ಶಿಕ್ಷಣಕ್ಕೆ ಅವಕಾಶ ಕಲ್ಪಿಸಲಾಗಿದೆ.
22 ವಿಷಯಗಳಲ್ಲಿ ಸ್ನಾತಕೋತ್ತರ ಕೋರ್ಸ್‍ನಲ್ಲಿ 2500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉನ್ನತ ಅಧ್ಯಯನ ನಡೆಸುತ್ತಿದ್ದಾರೆ.665ಕ್ಕಿಂತ ಹೆಚ್ಚು ಸಂಶೋಧನಾರ್ಥಿಗಳಿಂದ ಹಲವಾರು ವಿಷಯಗಳಲ್ಲ್ಲಿ ಪಿಎಚ್.ಡಿ ಸಂಶೋಧನೆಗಳು ನಿರಂತರವಾಗಿ ನಡೆಯುತ್ತಿವೆ. ವಿಶ್ವವಿದ್ಯಾಲಯವು ವಿವಿಧ ಅಭಿವೃದ್ಧಿ ಯೋಜನೆಗಳನ್ನು ರೂಪಿಸಿಕೊಳ್ಳುತ್ತ ಜ್ಞಾನಮುಖಿ, ಸಮಾಜಮುಖಿ, ಉದ್ಯೋಗಮುಖಿ ಚಿಂತನೆಗಳನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರುವುದರೊಂದಿಗೆ ಶೈಕ್ಷಣ ಕವಾಗಿ ರಾಣ ಚನ್ನಮ್ಮ ವಿಶ್ವವಿದ್ಯಾಲಯವು ಗುಣಾತ್ಮಕವಾಗಿ ಬೆಳೆದು ನಿಂತಿದೆ.
ಇದುವರೆಗೆ ಭೂತರಾಮನಹಟ್ಟಿಯ ಬಳಿ ಇರುವ 169.02 ಎಕರೆ ಜಮೀನು ರಾಣ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಹಸ್ತಾಂತರವಾಗದೇ ನೆನಗುದಿಗೆ ಬಿದ್ದಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದ್ದವು. ಈ ಸಂದರ್ಭದಲ್ಲಿ ಕರ್ನಾಟಕ ಘನ ಸರ್ಕಾರದ ಮಂತ್ರಿಮಂಡಳವು ಹಿರೇಬಾಗೇವಾಡಿಯ ಮಲ್ಲಪ್ಪನಗುಡ್ಡದ ಬಳಿ 126ಎಕರೆ 27 ಗುಂಟೆ ನೀಡಿರುವ ಜಮೀನಿನಲ್ಲಿ ಈಗಾಗಲೇ ಕಂಪೌಂಡ್ ಗೋಡೆಯ ನಿರ್ಮಾಣ ಪೂರ್ಣ ಗೊಂಡಿದ್ದು ಕಟ್ಟಡದ ನಿರ್ಮಾಣ ಕಾರ್ಯವು ತೀವ್ರ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ವಿವಿಧ ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಗಣ್ಯರಿಗೆ ಗೌರವಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಗುವುದು. ಅವರುಗಳೆಂದರೆ ದಿ. ಸುರೇಶ್ ಸಿ.ಅಂಗಡಿ ಇವರು ಸಲ್ಲಿಸಿದ ಗಣನೀಯ ಸೇವೆಗೆ ಸಮಾಜ ಸೇವಾಕ್ಷೇತ್ರಕ್ಕೆ ಮರಣೋತ್ತರವಾಗಿ ನೀಡಲಾಗುವುದು ಹಾಗೂ ನಾಡಿನ ಹಿರಿಯ ವಿದ್ವಾಂಸರು ಹಾಗೂ ಶ್ರೇಷ್ಠ ಸಾಹಿತಿಗಳಾದ ಪ್ರೊ. ಮಲ್ಲೆಪುರಂ ಜಿ. ವೆಂಕಟೇಶ ಅವರು ಸಾಹಿತ್ಯಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಇವರಿಗೆ ಸಾಹಿತ್ಯ ಕ್ಷೇತ್ರಕ್ಕೆ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಗುವುದು.
ಸದರಿ ಘಟಿಕೋತ್ಸವದಲ್ಲಿ ಒಟ್ಟು 47,185 ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಪದವಿಯನ್ನು ಪಡೆದುಕೊಳ್ಳಲು ಅರ್ಹರಾಗಿದ್ದಾರೆ .ಜೊತೆಗೆ 11 ಸ್ವರ್ಣ ಪದಕಗಳನ್ನು ಸ್ನಾತಕೋತ್ತರ ಹಾಗೂ ಸ್ನಾತಕ ವಿದ್ಯಾರ್ಥಿಗಳಿಗೆ ನೀಡಲಾಗುವುದು. 27 ಪಿಹೆಚ್.ಡಿ. ಪದವಿಗಳನ್ನು ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
ಕುಲಸಚಿವರಾದ ರಾಜೇಶ್ವರಿ ಜೈನಾಪುರಿ, ಮೌಲ್ಯಮಾಪನ ಕುಲಸಚಿವರಾದ ಪ್ರೋ. ಶಿವಾನಂದ ಗೋರನಾಳೆ, ಹಣಕಾಸು ಅಧಿಕಾರಿ ಎಸ್.ಬಿ ಆಕಾಶ, ಪ್ರೋ. ಚಂದ್ರಕಾಂತ ವಾಘಮೋರೆ ಪತ್ರಿಕಾಗೋಷ್ಟಿಯಲ್ಲಿ ಉಪಸ್ತಿತರಿದ್ದರು.////

 

ಪ್ರಧಾನ ಮಂತ್ರಿ ಗ್ರಾಮ ಸಡಕ ಯೋಜನೆ ಕಾಮಗಾರಿಗಳ ಪರಿವೀಕ್ಷಣೆ

ಬೆಳಗಾವಿ, ಮಾ.18: ಓಖಖಆಂ ಯಿಂದ ನಿಯೋಜಿರಾದ ಕೇಂದ್ರಗುಣ ನಿಯಂತ್ರಣ ಪರಿವೀಕ್ಷಕರು (ಓಕಿಒ) ಹೋತ್ವಾನಿ ರಮೇಶ ನಾನಕ ರಾಮ ಅವರು ಬೆಳಗಾವಿ ಜಿಲ್ಲೆಯ ಪ್ರಧಾನ ಮಂತ್ರಿ ಗ್ರಾಮ ಸಡಕ ಯೋಜನೆಯಡಿಯಲ್ಲಿ ಕೈಗೊಂಡ ಕಾಮಗಾರಿಗಳ ಪರಿವಿಕ್ಷಣೆಗಾಗಿ ಮಾರ್ಚ್ 23 ರಿಂದ 27 ರವರೆಗೆ ಪ್ರವಾಸ ಕೈಗೊಳ್ಳಲಿದ್ದಾರೆ.
ಪ್ಯಾಕೇಜ್ ನಂ- ಕೆ.ಎನ್. 04-103 ಎಂ.ಆರ್.ಎಲ್.21 ಹಿಡಲಗಾ ದಿಂದ ಅಂಬೇವಾಡೀ ಖಡೀ ಮಶೀನ ದಿಂದ ಕಾಡೋಲಿ ವರೆಗೆ, ಪ್ಯಾಕೇಜ್ ನಂ- ಕೆ.ಎನ್. 04-111, ಎಂ.ಆರ್.ಎಲ್.14 ಕನಗಲಾ ದಿಂದ ಸೋಲಾಪೂರ ವ್ಹಾಯಾ ಹೊನ್ನಿಹಾಳ ವರೆಗೆ ಕೆ .ಎನ.04 117 ಎಂ. ಆರ್. ಎಲ್ 25 ಚೀಲಭಾವಿ ದಿಂದ ಅರಳಿಕಟ್ಟಿ ಎಂ. ಡಿ. ಆರ್. ವರೆಗೆ ಪರಿವೀಕ್ಷಣೆ ಕೈಗೊಳ್ಳಲಿದ್ದಾರೆ.
ಅದೇ ರೀತಿಯಲ್ಲಿ ಪ್ಯಾಕೇಜ್ ನಂ- ಕೆ.ಎನ್. 04-142 ಎಂ.ಆರ್.ಎಲ್ 35- ಮುಚ್ಚಂಡಿ ಬುದ್ಯಾನೂರ ದಿಂದ ಕರವಿ ವರೆಗೆ ಕಾಮಗಾರಿಗಳನ್ನು ಎಂದು ಬೆಳಗಾವಿಯ ಯೋಜನಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////