Belagavi News In Kannada | News Belgaum

ಮಾನಸಿಕ ಖಿನ್ನತೆಗೆ 13ರ ಬಾಲಕಿ ಆತ್ಮಹತ್ಯೆಗೆ ಶರಣು

ಮಡಿಕೇರಿ: ಖಿನ್ನತೆಯಿಂದ ಬಳಲುತ್ತಿದ್ದ 7ನೇ ತರಗತಿಯ ವಿದ್ಯಾರ್ಥಿನಿ ತಮ್ಮ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು (ಏoಜಚಿgu) ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶಿವರಹಳ್ಳಿ ಗ್ರಾಮದ ಜಿತೇಂದ್ರ-ಅಕ್ಷತಾ ದಂಪತಿಯ ಪುತ್ರಿ ವೈಷ್ಣವಿ (13) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.  ಸೊಮವಾರಪೇಟೆಯ ಖಾಸಗಿ ಶಾಲೆಯಲ್ಲಿ (Pಡಿivಚಿಣe Sಛಿhooಟ) 7ನೇ ತರಗತಿ ಓದುತ್ತಿದ್ದ ವೈಷ್ಣವಿ ಕಳೆದ ಒಂದು ವಾರದಿಂದಲೂ ಖಿನ್ನತೆಯಿಂದ ಬಳಲುತ್ತಿದ್ದಳು. ಭಾನುವಾರ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ.