Belagavi News In Kannada | News Belgaum

ಗೂಡ್ಸ್ ವಾಹನದಲ್ಲಿ ಪ್ರಯಾಣ: ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ

ಬೆಳಗಾವಿ, ಮಾ.21: ಜಿಲ್ಲೆಯಲ್ಲಿ ಗೂಡ್ಸ್ ವಾಹನಗಳಲ್ಲಿ ಪ್ರಯಾಣಿಕರನ್ನು ಕರೆದೊಯ್ಯವುದು ಕಂಡುಬಂದರೆ‌ ಅಂತಹ ವಾಹನಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದ್ದಾರೆ.
ಗೂಡ್ಸ್ ವಾಹನಗಳಲ್ಲಿ ಜನರನ್ನು ಕರೆದೊಯ್ಯುವುದನ್ನು ಚುನಾವಣಾ ಆಯೋಗ ಕೂಡ ಗಂಭೀರವಾಗಿ ಪರಿಗಣಿಸಿದೆ.
ಗೂಡ್ಸ್ ವಾಹನಗಳಲ್ಲಿ ಜನರನ್ನು ಕರೆದೊಯ್ಯುವುದನ್ನು ಮೋಟಾರು ವಾಹನ ಕಾಯ್ದೆ ಪ್ರಕಾರ  ನಿಷೇಧಿಸಲಾಗಿರುತ್ತದೆ.
ಪೊಲೀಸ್ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಇಂದಿನಿಂದ ಜಿಲ್ಲೆಯಾದ್ಯಂತ ತೀವ್ರ ತಪಾಸಣೆ ನಡೆಸಲಿದ್ದಾರೆ. ಕಾನೂನು ಉಲ್ಲಂಘನೆ ಕಂಡುಬಂದರೆ ಕಠಿಣ ಕ್ರಮವನ್ನು ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ.
ಸುರಕ್ಷಿತ ಪ್ರಯಾಣದ ದೃಷ್ಟಿಯಿಂದ ಸಾರ್ವಜನಿಕರು ಗೂಡ್ಸ್ ವಾಹನಗಳಲ್ಲಿ ಸಂಚರಿಸಬಾರದು. ವಾಹನ ಮಾಲೀಕರು ಕೂಡ ಇದಕ್ಕೆ ಅವಕಾಶ ನೀಡಬಾರದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.