75ನೇ ವರ್ಷದ ಸ್ಮರಣಾರ್ಥ ಆಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ ಕಾರ್ಯಕ್ರಮಗಳು ಏ.1 ರಿಂದ ಮೇ 31 ರವರೆಗೆ

ಬೆಳಗಾವಿ, ಮಾ.23: ಭಾರತ ಸರ್ಕಾರದ ಯುವ ಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಸಂಘಟನೆ ವತಿಯಿಂದ ಭಾರತ 75ನೇ ವರ್ಷದ ಸ್ಮರಣಾರ್ಥ ಆಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ಯುವ ಸಂವಾದ ಇಂಡಿಯಾ-2047 ಕಾರ್ಯಕ್ರಮವನ್ನು ಏಪ್ರಿಲ್ 1 ರಿಂದ ಮೇ 31 ರವರೆಗೆ ಕಾರ್ಯಕ್ರಮವನ್ನು ಆಚರಿಸಲು ಉದ್ದೇಶಿಸಿದೆ.
ಈ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ತುಂಬಾ ನುರಿತ, ಉತ್ತಮ ಜ್ಞಾನವುಳ್ಳ ಗಣ್ಯರನ್ನು ಸೇರಿಸಿಕೊಂಡು ಪಂಚ ಪ್ರಾಣ ಯೋಜನೆಯನ್ನು ಸುಮಾರು 500 ಕ್ಕೂ ಹೆಚ್ಚು ಯುವಜನರೊಡನೆ ಪ್ರಶ್ನೋತ್ತರ ಮೂಲಕ ಸಂವಾದ ನಡೆಸಿ ಯಶಸ್ವಿಗೊಳಿಸಬೇಕಿದೆ.
ಜಿಲ್ಲೆಯಲ್ಲಿ ಸಮುದಾಯ ಅಭಿವೃದ್ಧಿ ಸಂಸ್ಥೆಗಳ ಮೂಲಕ ಮೂರು ಕಾರ್ಯಕ್ರಮಗಳನ್ನು ನಡೆಸಲಾಗುವುದು. ಪ್ರತಿಯೊಂದು ಕಾರ್ಯಕ್ರಮಕ್ಕೆ 20,000 ರೂ.ಗಳ ಅನುದಾನ ನಿಗದಿಪಡಿಸಲಾಗಿದ್ದು, ಸಮುದಾಯ ಅಭಿವೃದಿ ಸಂಸ್ಥೆಗಳಿಗೆ ಕೊಡಲಾಗುವುದು. ಆಸಕ್ತಿ ಇರುವ ಜಿಲ್ಲೇಯ ಸಮುದಾಯ ಅಭಿವೃದ್ಧಿ ಸಂಸ್ಥೆಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿಗಳು ಆಯಾ ಜಿಲ್ಲಾ ನೆಹರು ಯುವ ಕೇಂದ್ರಗಳಲ್ಲಿ ಕೊಡಲಾಗುವುದು, ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ದಾಖಲೆಗಳ ಸಮೇತ ಮಾರ್ಚ 29 ರೊಳಗಾಗಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವಜನ ಅಧಿಕಾರಿ, ಕಛೇರಿ ವಿಳಾಸ ಅಣ್ಣಪೂರ್ಣ ನಿಲಯ ಪ್ರಥಮ ಅಡ್ಡ ರಸ್ತೆ ಮಹಾಂತೇಶ ನಗರ ಬೆಳಗಾವಿ ಪಿನ್ ಕೋಡ ನಂ: 590017 ರವರನ್ನು ಅಥವಾ ಕಛೇರಿ ದೂರವಾಣಿ ಸಂಖ್ಯೆ. 0831-2453496 ಮೊ. ಸಂಖ್ಯೆ. 9620646488 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದಾರೆ.