Belagavi News In Kannada | News Belgaum

ಮಾ.31 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು : 2022-23ನೇ ಸಾಲಿನ ಎಸ್ ಎಸ್ ಎಲ್ ಸಿ ಅಂತಿಮ ಪರೀಕ್ಷೆಗಳು ದಿನಾಂಕ 31-03-2023 ರಿಂದ 15-04-2023ರವರೆಗೆ ನಡೆಯಲಿದ್ದು, ಈ ಬಾರಿ ವಿದ್ಯಾರ್ಥಿಗಳಿಗೆ ಅನುಕೂಲ ಆಗಲು ಬಹು ಆಯ್ಕೆ ಪ್ರಶ್ನೆಗಳನ್ನ ನೀಡಲಾಗುತ್ತಿದೆ.

ಬಿ.ಇ.ಓ ನೇತೃತ್ವದ ಸಮಿತಿಯ ಸಮ್ಮುಖದಲ್ಲಿಯೇ ಪ್ರಶ್ನೆ ಪತ್ರಿಕೆಗಳನ್ನು ಆಯಾ ತಾಲೂಕು ಖಜಾನೆಗಳಿಂದ ಪರೀಕ್ಷೆ ಕೇಂದ್ರಗಳಿಗೆ ರವಾನಿಸಬೇಕು. ಇತರೆ ಕಾರಣಗಳಿಗೆ ಖಜಾನೆಯ ಸ್ಟ್ರಾಂಗ್ ರೂಮ್ ತೆರೆಯುವ ಪ್ರಸಂಗ ಬಂದರೆ, ಬಿ.ಇ.ಓ ನೇತೃತ್ವದ 3 ಜನರ ಸಮಿತಿ ಮಾಹಿತಿ ನೀಡಿ ಅವರ ಹಾಜರಿಯಲ್ಲಿ ಸ್ಟ್ರಾಂಗ್ ರೂಮ್ ತೆರೆಯಬೇಕು. ಪ್ರಶ್ನೆ ಪತ್ರಿಕೆಗಳಿಗೆ ಯಾವುದೇ ರೀತಿಯಲ್ಲಿ ಹಾನಿ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಇಲಾಖೆ ಸೂಚನೆ ನೀಡಿದೆ.

ಎಸ್.ಎಸ್.ಎಲ್‍ಸಿ. ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಇರುವ ಪೊಲೀಸ್ ಸಿಬ್ಬಂದಿ ನೇಮಕ ಮಾಡಬೇಕು. ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಹೊರಡಿಸಲಾಗಿರುತ್ತದೆ. ಪರೀಕ್ಷೆ ಬರೆಯವ ವಿದ್ಯಾರ್ಥಿ ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ ಸಿಬ್ಬಂದಿಗಳನ್ನು ಹೊರತು ಪಡೆಸಿ ಅನ್ಯರು ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸುವಂತಿಲ್ಲ. ನಕಲು ಹಾಗೂ ಇತರೆ ಅಕ್ರಮಗಳು ನಡೆಯದಂತೆ ಕಡಿವಾಣ ಹಾಕಬೇಕು.

ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಮೂಲಭೂತ ಸೌರ್ಯಗಳ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಪೋನ್, ಸ್ಮಾರ್ಟ್ ಫೋನ್ ಹಾಗೂ ಎಲೆಕ್ಟ್ರಿಕಲ್ ವಸ್ತುಗಳನ್ನು ಕೊಂಡಯ್ಯಲು ಅವಕಾಶವಿಲ್ಲ. ಪರೀಕ್ಷಾ ಕೊಠಡಿಗಳಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸೂಕ್ತ ಆಸನದ ವ್ಯವಸ್ಥೆ ಕಲ್ಪಿಸಬೇಕು. ಪ್ರತಿ ಕೊಠಡಿಯಲ್ಲೂ ಗಡಿಯಾರ ಇರಬೇಕು.

ವಿದ್ಯಾರ್ಥಿಗಳು ಸಮವಸ್ತ್ರಧರಿಸಿ ಪರೀಕ್ಷಾ ಕೊಠಡಿಗೆ ಹಾಜರಾಗಬೇಕಿದ್ದು, ಹಿಜಾಬ್ ಧರಿ ಬಂದರೆ ಪರೀಕ್ಷೆಗೆ ಅವಕಾಶ ಇರುವುದಿಲ್ಲ. ಕನಿಷ್ಟ ಒಂದು ಗಂಟೆಗೂ ಮೊದಲೇ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶ ಪತ್ರದ ಜತೆಗೆ ತೆರಳಿ ಪರೀಕ್ಷಾ ಕೊಠಡಿಯನ್ನು ಹುಡಿಕಿಕೊಳ್ಳಬೇಕಿದೆ. ಈಗಾಗಲೇ ಕೆ ಎಸ್ ಆರ್ ಟಿ ಸಿ, ಬಿಎಂಟಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯ ದಿನಗಳಂದು ತನ್ನ ಸಾರಿಗೆ ಬಸ್ ನಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ನೀಡಿತ್ತು. ಈಗ ಮುಂದುವರೆದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೂ ಪರೀಕ್ಷೆಯಂದು ಕೆ ಎಸ್ ಆರ್ ಟಿ ಸಿ, ಬಿಎಂಟಿಸಿ ಬಸ್ ನಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ನೀಡಿದೆ.

ಈ ಬಗ್ಗೆ ಕೆ ಎಸ್ ಆರ್ ಟಿ ಸಿಯಿಂದ ಸುತ್ತೋಲೆ ಹೊರಡಿಸಿದ್ದು, 2022-23ನೇ ಸಾಲಿನ ಎಸ್ ಎಸ್ ಎಲ್ ಸಿ ಅಂತಿಮ ಪರೀಕ್ಷೆಗಳು  ದಿನಾಂಕ 31-03-2023 ರಿಂದ 15-04-2023ರವರೆಗೆ ನಡೆಸಲು ತೀರ್ಮಾನಿಸಿದೆ. ಅಂದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ  ಪರೀಕ್ಷಾ ಕೇಂದ್ರಕ್ಕೆ ತೆರಳಲು ಉಚಿತ ಅವಕಾಶ ನೀಡುವಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕೋರಿದ್ದಾರೆ ಎಂದಿದೆ.

ಈ ಹಿನ್ನಲೆಯಲ್ಲಿ ರಾಜ್ಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ 2022-23ನೇ ಸಾಲಿನಲ್ಲಿ ಪರೀಕ್ಷೆ ನಡೆಯುವ ದಿನಾಂಕಗಳಂದು ಎಸ್ ಎಸ್ ಎಲ್ ಸಿ ಪರೀಕ್ಷಾ ಪರವೇಶ ಪತ್ರವನ್ನು ತೋರಿಸಿ, ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ತೆರಳಲು ಮತ್ತು ವಾಪಾಸ್ಸು ಮರಳಲು ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಕೇಂದ್ರಕ್ಕೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಉಚಿತವಾಗಿ ಪ್ರಯಾಣವನ್ನು ಅನುಮತಿಸುವಂತೆ ನಿಗಮದ ಎಲ್ಲಾ ಚಾಲಕ, ನಿರ್ವಾಹಕರುಗಳಿಗೆ ಸೂಚಿಸಿದೆ.

ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆಯ ವೇಳಾಪಟ್ಟಿ
ಮಾರ್ಚ್ 31- ಪ್ರಥಮ ಭಾಷೆ,
ಏಪ್ರಿಲ್ 3- ಗಣಿತ,
ಏಪ್ರಿಲ್ 6- ದ್ವಿತೀಯ ಭಾಷೆ
ಏಪ್ರಿಲ್ 10- ವಿಜ್ಞಾನ,
ಏಪ್ರಿಲ್ 12- ತೃತೀಯ ಭಾಷೆ