ಬೆಳಗಾವಿಯಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 70 ಲಕ್ಷ ಹಣ ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 70 ಲಕ್ಷ ಹಣವನ್ನು ಕಾಗವಾಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ಕಾಗವಾಡ ಚೆಕ್ಪೋಸ್ಟ್ನಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ದಾಖಲೆ ಇಲ್ಲದೇ ಕಾರಿನಲ್ಲಿದ್ದ 70 ಲಕ್ಷ ಹಣವನ್ನು ವಶಕ್ಕೆ ಪಡೆಯಲಾಗಿದೆ. ಮಹಾರಾಷ್ಟ್ರದಿಂದ ದಾಖಲೆ ಇಲ್ಲದೇ ಹಣವನ್ನು ಸಾಗಿಸುತ್ತಿದ್ದರು ಎನ್ನಲಾಗಿದೆ. ಕಾಗವಾಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಸದ್ಯ ಪೊಲೀಸರು ವಶಕ್ಕೆ ಪಡೆದ ಹಣಕ್ಕೆ ದಾಖಲೆ ಕೇಳುತ್ತಿದ್ದಾರೆ.