Belagavi News In Kannada | News Belgaum

ಶಶಿಭೂಷಣ ಹೆಗಡೆ ಬಿಜೆಪಿ ಸೇರ್ಪಡೆ

ಬೆಂಗಳೂರು: ಮಾಜಿ ಸಿಎಂ ದಿ.ರಾಮಕೃಷ್ಣ ಹೆಗಡೆ ಅವರ ಅಣ್ಣ ಗಣೇಶ ಹೆಗಡೆ ಅವರ ಮೊಮ್ಮಗ, ಸಿದ್ದಾಪುರದ ಶಶಿಭೂಷಣ ಹೆಗಡೆ ಇಂದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದರು.

ಇಂದು ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಶಿಭೂಷಣ ಹೆಗಡೆ ದೊಡ್ಮನೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂದರು.

ಈ ವೇಳೆ ಕೇಂದ್ರ ಸಚಿವರಾದ ಭಗವಂತ ಖೂಬಾ, ಶೋಭಾ ಕರಂದ್ಲಾಜೆ ಮೊದಲಾದವರು ಉಪಸ್ಥಿತರಿದ್ದರು.

ಶಶಿಭೂಷಣ ಹೆಗಡೆ ಈ ಹಿಂದೆ ಜೆಡಿಎಸ್ ನಿಂದ ಶಿರಸಿ- ಸಿದ್ದಾಪುರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು./////