ಕುಂದಾನಗರಿಯಲ್ಲಿಂದು ದಿಢೀರ್ ಜಿಲ್ಲಾ ಮಟ್ಟದ ಬಿಜೆಪಿ ಕೋರ್ ಕಮಿಟಿ ಸಭೆ

ಬೆಳಗಾವಿ : ಕುಂದಾನಗರಿಯಲ್ಲಿಂದು ದಿಢೀರ್ ಜಿಲ್ಲಾ ಮಟ್ಟದ ಬಿಜೆಪಿ ಕೋರ್ ಕಮಿಟಿ ಸಭೆ ಕರೆಯಲಾಗಿದ್ದು, ನಗರದ ಖಾಸಗಿ ಹೋಟೆಲ್ನಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ನೇತೃತ್ವದಲ್ಲಿ ಬೆಳಗಾವಿ ನಗರ, ಗ್ರಾಮಾಂತರ ಹಾಗೂ ಚಿಕ್ಕೋಡಿ 3 ಸಂಘಟನಾತ್ಮಕ ಜಿಲ್ಲೆಗಳ ಪ್ರತ್ಯೇಕ ಕೋರ್ ಕಮೀಟಿ ಸಭೆ ನಡೆಯಿತು.
ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೂಡ ಭಾಗಿಯಾಗಿದ್ರು. ಅಲ್ಲದೇ ಜಿಲ್ಲೆಯ 11 ಕ್ಷೇತ್ರದ ಹಾಲಿ ಬಿಜೆಪಿ ಶಾಸಕರು, ಇಬ್ಬರು ಸಂಸದರು, ಓರ್ವ ರಾಜ್ಯಸಭೆ ಸದಸ್ಯರು ಪಾಲ್ಗೊಂಡಿದ್ದು ಕೋರ್ ಕಮಿಟಿ ಸಭೆಯಲ್ಲಿ ಪ್ರತಿ ವಿಧಾನಸಭೆ ಕ್ಷೇತ್ರದಿಂದ ಮೂವರು ಆಕಾಂಕ್ಷಿಗಳ ಆಯ್ಕೆ ಆಗಲಿದೆ. ತಲಾ ಒಂದು ಕ್ಷೇತ್ರದಿಂದ ಮೂವರು ಆಕಾಂಕ್ಷಿಗಳನ್ನು ಆಯ್ಕೆ ಮಾಡಿ ರಾಜ್ಯ ಚುನಾವಣಾ ಸಮಿತಿಗೆ ಪಟ್ಟಿ ರವಾನೆ ಮಾಡಲಿದ್ದಾರೆ.
ಬೆಳಗಾವಿಯ 18 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಲ್ಲಿ ಗೆಲುವಿನ ಗುರಿಯನ್ನು ಹೈಕಮಾಂಡ್ ಹೊಂದಿದೆ. ನಂತರ ಸಭೆಯನ್ನು ಮುಗಿಸಿ ಪ್ರಲ್ಹದ ಜೋಶಿ ಮಾಧ್ಯಮಗಳ ಜೊತೆ ಮಾತನಾಡಿ ಬೆಳಗಾವಿ ಎಲ್ಲ ೧೮ ಕ್ಷೇತ್ರ ಗೆಲ್ಲಬೇಕು ಎನ್ನುವ ಹಿನ್ನಲೆಯಲ್ಲಿ ಎಲ್ಲರ ಜೊತೆ ಮುಖಾಮುಖಿಯಾಗಿ ಮಾತನಾಡಿದ್ದೇನೆ. ಕೆಲವು ಗೊಂದಲವಿದ್ದು, ಅದನ್ನು ಸರಿ ಪಡಿಸಿ ನೇರವಾಗಿ ನನ್ನ ಜೊತೆ ಮಾತನಾಡಿ ಎಂದು ಸಲಹೆ ಕೊಟ್ಟಿದ್ದೇನೆ. ಏಪ್ರಿಲ್ ೮ಕ್ಕೆ ಬಿಜೆಪಿ ಮೊದಲ ಹಂತದ ಪಟ್ಟಿ ಬಿಡುಗಡೆ ಮಾಡುತ್ತಿದ್ದೇವೆ. ಇಂದು ಸಂಜೆ ಬೆಂಗಳೂರಿನ ಕೋರ್ ಕಮಿಟಿ ಸಭೆಯಲ್ಲಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು.////