Belagavi News In Kannada | News Belgaum

ವಿಶೇಷಚೇತರಿಗೆ ಮತದಾನದ ಜಾಗೃತಿ ಕಾರ್ಯಕ್ರಮ

ಬೆಳಗಾವಿ : ಗೋಕಾಕ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿನ ವಿಶೇಷಚೇತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಾಗೂ ಜಾಗೃತಿ ಜಾಥಾವನ್ನು ಗುರುವಾರ ಹಮ್ಮಿಕೊಳ್ಳಲಾಯಿತು.
ಗೋಕಾಕ ನಗರದ ತಾಪಂ ಕಚೇರಿಯಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಇದೇ ವೇಳೆ ತಾಪಂ ಇಒ ಮುರಳೀಧರ್ ದೇಶಪಾಂಡೆ ಅವರು ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಬಳಿಕ ತಾಪಂ ಕಾರ್ಯಾಲಯದಿಂದ ಗೋಕಾಕ ನಗರ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಬೈಕ್ ರ್ಯಾಲಿಯೂ ಬಸವೇಶ್ವರ ವೃತ್ತದವರೆಗೆ ಜರುಗಿತು.
ಇದೇ ಸಂದರ್ಭದಲ್ಲಿ ಮಾತನಾಡಿದ ತಾಪಂ ಇಓ ಮುರಳೀಧರ ದೇಶಪಾಂಡೆ ಅವರು, ವಿಧಾನಸಭೆ ಚುನಾವಣೆಯಲ್ಲಿ ಶೇ.100 ರಷ್ಟು ಮತದಾನ ಮಾಡುವ ನಿಟ್ಟಿನಲ್ಲಿ ವಿವಿಧ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಎಲ್ಲ ವಿಶೇಷಚೇತನರು ಕೂಡ ಮತದಾನ ಮಾಡಬೇಕು ಎಂದು ತಿಳಿಸಿದರು.
ತಾ ಪಂ ವ್ಯವಸ್ಥಾಪಕರು ಹೊಸಮನಿ ಐಇಸಿ ಸಂಯೋಜಕ ಶಂಕರ ಗುಜನಟ್ಟಿ, ಎಂಐಎಸ್ ಸಂಯೋಜಕ ರಾಹುಲ್, ತಾಂತ್ರಿಕ ಸಂಯೋಜಕ ಶಬ್ಬೀರ್ ಮೊದಲಾದವರು ತಾ ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.//////