ಶಸ್ತ್ರಚಿಕಿತ್ಸೆಗೆ ಲಂಚದ ಬೇಡಿಕೆಯಿಟ್ಟ ವೈದ್ಯ ಲೋಕಾಯುಕ್ತ ಬಲೆಗೆ

ಹಾವೇರಿ: ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಮಾಡಲು ₹4 ಸಾವಿರ ಲಂಚದ ಬೇಡಿಕೆ ಇಟ್ಟಿದ್ದ ಹಾವೇರಿ ಜಿಲ್ಲಾಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ಡಾ.ಉಮೇಶ ಕೆಳಗಿನಮನಿ ಹಾಗೂ ಹೊಮ್ಮರಡಿ ಗ್ರಾಮದ ಆಶಾ ಕಾರ್ಯಕರ್ತೆ ದಾಕ್ಷಾಯಿಣಿ ಚಿಕ್ಕನಂದಿ ಎಂಬುವರು ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ವೀರೇಶ ಹಾದರಗೇರಿ ಅವರ ಪತ್ನಿ ವಿಜಯಲಕ್ಷ್ಮಿ ಮತ್ತು ಸಂಬಂಧಿ ಲಕ್ಷ್ಮಿ ಅವರಿಗೆ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಮಾಡಲು ವೈದ್ಯ ಡಾ.ಉಮೇಶ್ ₹4 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 2 ಸಾವಿರವನ್ನು ಮುಂಗಡವಾಗಿ ಪಡೆದುಕೊಂಡು, ಉಳಿದ 2 ಸಾವಿರ ಲಂಚವನ್ನು ಪಡೆಯುವಾಗ ಲೋಕಾಯುಕ್ತ ಪೊಲೀಸರು ಯಶಸ್ವಿಯಾಗಿ ಆರೋಪಿಗಳನ್ನು ಬಂಧಿಸಿದ್ದಾರೆ.
ಹೊಸರಿತ್ತಿಯಲ್ಲಿರುವ ಡಾ.ಉಮೇಶ ಅವರ ಮನೆಯಲ್ಲೂ ಲೋಕಾಯುಕ್ತ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದು, ತನಿಖೆ ಮುಂದುವರಿದಿದೆ’ ಎಂದು ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್ ಬಿ.ಪಿ. ಮಾಹಿತಿ ನೀಡಿದ್ದಾರೆ./////