Belagavi News In Kannada | News Belgaum

ಪತಿ ಚಾಕೊಲೇಟ್ ತಂದು ಕೊಡಲಿಲ್ಲವೆಂದು ಪತ್ನಿ ಆತ್ಮಹತ್ಯೆ

ಬೆಂಗಳೂರು: ಎರಡು ಮಕ್ಕಳ ತಾಯಿಯೊಬ್ಬರು, ಪತಿ ಚಾಕೊಲೇಟ್ ತಂದು ಕೊಡಲಿಲ್ಲ ಎಂದು ಬೇಸತ್ತು ಪತ್ನಿ ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಂದಿನಿ‌ (30) ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ. 6 ವರ್ಷದ ಹಿಂದೆ ಮದುವೆಯಾಗಿದ್ದ ಮೃತ ನಂದಿನಿ‌ಗೆ ಇಬ್ಬರು ಮಕ್ಕಳಿದ್ದಾರೆ. ಇನ್ನು ನಂದಿನಿ ಪತಿ ಸಲೂಲ್​ನಲ್ಲಿ ಕೆಲಸ ಮಾಡಿಕೊಂಡಿದ್ದ. ಅದರಂತೆ ನಿನ್ನೆ ಬೆಳಗ್ಗೆ ಪತಿ ಕೆಲಸಕ್ಕೆ ಹೋಗುವಾಗ ಚಾಕೋಲೆಟ್ ತೆಗೆದುಕೊಂಡು ಬರುವಂತೆ ಹೇಳಿದ್ದಳಂತೆ. ಆದ್ರೆ, ಮಧ್ಯಾಹ್ನವಾದರೂ ಪತಿ ಚಾಕೋಲೆಟ್ ತಂದು ಕೊಟ್ಟಿಲ್ಲ. ಅಲ್ಲದೇ ಫೋನ್ ಮಾಡಿದ್ದರೂ ಪತಿ ಸ್ವೀಕರಿಸಿಲ್ವಂತೆ. ಇದರಿಂದ ಮನನೊಂದು ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ. ಬಳಿಕ ಪತಿ ಮನೆಗೆ ಬಂದು ನೋಡಿದಾಗ ನಂದಿನಿ ನೇಣು ಹಾಕಿಕೊಂಡಿದ್ದಳು. ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದ್ರೆ, ಅಷ್ಟರಲ್ಲಾಗಲೇ ನಂದಿನಿ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತ ನಂದಿನಿ‌ಗೆ ಇಬ್ಬರು ಮಕ್ಕಳಿದ್ದಾರೆ.////