ಅಕ್ರಮವಾಗಿ ಸಾಗಿಸುತ್ತಿದ್ದ 1 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ ಪೊಲೀಸರು

ಬೀದರ್: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಗಾಂಜಾ ಖದೀಮರನ್ನು ಬಂಧಿಸಿ ಬೀದರ್ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದಾರೆ.
ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ. ಅಲ್ಲದೇ 2 ಕೆಜಿ ತೂಕದ 50 ಗಾಂಜಾ ಪ್ಯಾಕೆಟ್‌ಗಳಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 100 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ದು, ಸುಮಾರು 1 ಕೋಟಿ ರೂ. ಮೌಲ್ಯದ ಗಾಂಜಾವನ್ನು ಬೀದರ್ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಅಕ್ರಮ ಗಾಂಜಾ ಸಾಗಾಟಕ್ಕೆ ಬಳಸಿದ ಒಂದು ಕಾರು ಹಾಗೂ ನಾಲ್ಕು ಮೊಬೈಲ್‌ಗಳನ್ನು ಬೀದರ್ ಜಿಲ್ಲೆಯ ಹುಮ್ನಾಬಾದ್ ಬಳಿ ಜಪ್ತಿಪಡಿಸಲಾಗಿದೆ. ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಸಾಗಾಟ ಮಾಡುತ್ತಿದ್ದಾಗ ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿದ ಪೊಲೀಸರು ಅಪಾರ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಮನ್ನಖೇಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.//////