Belagavi News In Kannada | News Belgaum

ಕೆಎಸ್‌ಆರ್‌ಟಿಸಿ ಬಸ್ ಹರಿದು 2 ವರ್ಷದ ಮಗು ಸಾವು

ಬೆಳಗಾವಿ: ಎರಡು ವರ್ಷದ ಮಗುವಿನ ಮೇಲೆ ಸರ್ಕಾರಿ ಬಸ್ ಒಂದು ಹರಿದು ಸ್ಥಳದಲ್ಲೇ ಮಗು ಮೃತಪಟ್ಟಿರುವ  ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಪರಮಾನಂದವಾಡಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ.
ಮೃತ ಮಗುವನ್ನು ಗ್ರಾಮದ ಶ್ಲೋಕ ಅಶೋಕ ತುಳಸಿಗೇರಿ (2) ಎಂದು ಗುರುತಿಸಲಾಗಿದೆ. ಪರಮಾನಂದವಾಡಿಯಿಂದ ರಾಯಬಾಗ ಪಟ್ಟಣಕ್ಕೆ ತೆರಳುತ್ತಿದ್ದ ಬಸ್​ ಇದಾಗಿದ್ದು, ಮಗು ರಸ್ತೆ ದಾಟುವಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿ ಸ್ಥಳೀಯರು ಸರ್ಕಾರಿ ಬಸ್ಸಿನ ಗಾಜುಗಳನ್ನು ಪುಡಿಪುಡಿ ಮಾಡಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಸ್ಥಳಕ್ಕೆ ಕುಡಚಿ ಪೊಲೀಸರು ಆಗಮಿಸಿ ಪ್ರತಿಭಟನಕಾರರನ್ನು ಸಮಾಧಾನಪಡಿಸಿದರು. ಅಪಘಾತ ಸಂಭವಿಸುತ್ತಿದ್ದಂತೆ ಚಾಲಕ ಅಲ್ಲಿಂದ ಪರಾರಿಯಾಗಿದ್ದು ಈ ಕುರಿತು ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ./////