Belagavi News In Kannada | News Belgaum

ಮುಂದಿನ 2 ದಿನಗಳ ಕಾಲ ಬೆಳಗಾವಿ ಸೇರಿದಂತೆ 10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 2 ದಿನಗಳ ಕಾಲ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಣೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕಲಬುರಗಿ, ಬೀದರ್, ಕೊಪ್ಪಳ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಾಗೂ ಕರಾವಳಿಯ ಎಲ್ಲಾ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಲ್ಲಿ ಬೆಳಗ್ಗೆ ಶುಭ್ರ ಆಕಾಶವಿರಲಿದ್ದು, ಸಂಜೆಯ ಸಮಯದಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ. ಮಳೆಯ ಯಾವುದೇ ಮುನ್ಸೂಚನೆ ಇಲ್ಲ. ಗೋಕಾಕ್, ಬೈಲಹೊಂಗಲ, ಔರಾದ್, ಮುಂಡಗೋಡ, ನರಗುಂದ, ಬೆಳಗಾವಿ, ಖಜೂರಿ, ಹುಮನಾಬಾದ್, ಶೃಂಗೇರಿಯಲ್ಲಿ ಮಳೆಯಾಗಿದೆ./////