ಸಚಿವೆ ಶಶಿಕಲಾ ಜೊಲ್ಲೆಗೆ ಘೇರಾವ್ ಹಾಕಿದ ಗಲಟಗಾ ಗ್ರಾಮಸ್ಥರು

ಬೆಳಗಾವಿ: ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಆರೋಪಿಸಿ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಗ್ರಾಮಕ್ಕೆ ಪ್ರವೇಶಿಸದಂತೆ ಸ್ಥಳೀಯರು ತಡೆಹಿಡಿದಿರುವ ಘಟನೆ ಚಿಕ್ಕೋಡಿ ತಾಲೂಕಿನ ಗಲಟಗಾ ಗ್ರಾಮದಲ್ಲಿ ನಡೆದಿದೆ.
ಸಚಿವೆ ಜೊಲ್ಲೆ ಗ್ರಾಮಕ್ಕೆ ಭೇಟಿ ನೀಡುವುದನ್ನು ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಈ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯಗಳು ಮತ್ತು ಮೂಲಸೌಕರ್ಯಗಳನ್ನು ಸರ್ಕಾರ ಮಾಡಿಲ್ಲ ಎಂದು ಶಶಿಕಲಾ ಜೊಲ್ಲೆ ಬರುತ್ತಿರುವ ವೇಳೆ ಗ್ರಾಮಸ್ಥರು ಆರೋಪಿಸಿ ಬರದಂತೆ ತಡೆದರು ಎಂದು ಹೇಳಲಾಗುತ್ತಿದೆ. ಗ್ರಾಮಸ್ಥರು ಆಕ್ರೋಶ ಹೊರಹಾಕುತ್ತಾ ಸಚಿವೆಯನ್ನು ಸುತ್ತುವರೆದು, ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದರು. ಇದುವರೆಗೆ ಇತ್ತ ಸುಳಿದಿರದ ಸಚಿವೆ ಇಂದು ಬರುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದರು. ಇದರಿಂದ ಬಿಜೆಪಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಭಾರೀ ಮುಜುಗರವಾಗಿದೆ./////