Belagavi News In Kannada | News Belgaum

ಸ್ವ ಇಚ್ಛೆಯಿಂದಲೇ ರಾಜಕೀಯ ನಿವೃತ್ತಿ ಘೋಷಿಸಿದ್ದೇನೆ: ಕೆ.ಎಸ್ ಈಶ್ವರಪ್ಪ ಸ್ಪಷ್ಟನೆ

ಶಿವಮೊಗ್ಗ: ಪಕ್ಷದ ಏಳಿಗೆಗಾಗಿ ಅಲ್ಲದೆ ಹೊಸ ಅಭ್ಯರ್ಥಿಗಳಿಗೆ ಅವಕಾಶ ಸಿಗಬೇಕೆನ್ನುವ ಸದಭಿರುಚಿಯಿಂದ ಸ್ವ -ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ಹಿಂದೆ ಸರಿದಿದ್ದೇನೆ ಎಂದು ಮಾಜಿ ಸಚಿವ, ಬಿಜೆಪಿ ಪಕ್ಷದ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ರಾಜ್ಯ ಚುನಾವಣಾ ಸಮಿತಿಯ ಸಂದರ್ಭದಲ್ಲಿ ನಾನು ಈ ಬಾರಿ ಚುನಾವಣೆಯಲ್ಲಿ ಸ್ಪರ್ದಿಸುವುದಿಲ್ಲ ಎಂದು ಪಕ್ಷದ ಹಿರಿಯ ನಾಯಕರಲ್ಲಿ ಮನವಿಯನ್ನು ಮಾಡಿದ್ದೆ ಅದಕ್ಕೆ ಪಕ್ಷದ ಹಿರಿಯರು ಯಾರೂ ಕೂಡ ಸಮ್ಮತಿ ನೀಡಿರಲಿಲ್ಲ ಹಾಗಾಗಿ ಇಂದು ಬೆಳಿಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರಿಗೆ ಪತ್ರ ಬರೆದು ಈ ಬಾರಿ ನನ್ನ ಹೆಸರನ್ನು ಯಾವುದೇ ವಿಧಾನ ಸಭಾ ಕ್ಷೇತ್ರಕ್ಕೆ ಪರಿಗಣಿಸದಂತೆ ಮನವಿ ಮಾಡಿದ್ದೆ ಅಲ್ಲದೆ ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಗೆ ಪೂರ್ಣ ಬಹುಮತವನ್ನು ಕೊಟ್ಟು ಸಂಪೂರ್ಣ ಬಹುಮತ ತರುವಲ್ಲಿ ಹೆಚ್ಚಿನ ಪ್ರಯತ್ನ ಮಾಡುವ ಹಂಬಲದಲ್ಲಿ ಈ ನಿರ್ಧಾರಕ್ಕೆ ಬಂದಿದ್ದೇನೆ ಹಾಗಾಗಿ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರ ಮಾಡಿದೆ ಎಂದು ಹೇಳಿದರು./////