ನಾಳೆ ಮಾಜಿ ಸಿಎಂ ಸಿದ್ದರಾಮಯ್ಯ ಬೆಳಗಾವಿಗೆ

ಬೆಳಗಾವಿ: ಬೆಳಗಾವಿಯ ಭೂತರಾಮನಹಟ್ಟಿಯ ಮೈದಾನದಲ್ಲಿ ಏ. 14ರಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ನಡೆಯುವ ಕಾಂಗ್ರೆಸ್ ‘ಪ್ರಜಾಧ್ವನಿ’ ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ವಿವಿಧ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ್ ನಾವಲಗಟ್ಟಿ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ತಿಳಿಸಿದ ಅವರು, ನಾಳೆ ಬೆಳಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಂಜೆ 5.45ಕ್ಕೆ ಸಾಂಬ್ರಾ ನಿಲ್ದಾಣ ಮೂಲಕ ಬೆಳಗಾವಿಗೆ ಆಗಮಿಸಿ ನಂತರ 6.30ಕ್ಕೆ ಭೂತರಾಮನಹಟ್ಟಿಗೆ ಬರಲಿದ್ದಾರೆ. ಅಲ್ಲಿ ನಡೆಯುವ ಕಾಂಗ್ರೆಸ್ ‘ಪ್ರಜಾಧ್ವನಿ’ ಸಮಾವೇಶದಲ್ಲಿ ರಾಜ್ಯ ಬಿಜೆಪಿ ಸರ್ಕಾರ ಆಡಳಿತದಲ್ಲಿ ಸಂಪೂರ್ಣ ವಿಫಲವಾಗಿರುವ ಹಾಗೂ ಬಿಜೆಪಿ ಸರ್ಕಾರ ಮಾಡಿರುವ ಭ್ರಷ್ಟಾಚಾರ ಕುರಿತು ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ‘ಪ್ರಜಾಧ್ವನಿ’ ಸಮಾವೇಶದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಶಾಸಕರಾದ ಗಣೇಶ ಹುಕ್ಕೇರಿ, ಲಕ್ಷ್ಮೀ ಹೆಬ್ಬಾಳಕರ, ಅಂಜಲಿ ನಿಂಬಾಳ್ಕರ, ಮಹಾಂತೇಶ ಕೌಜಲಗಿ, ಚಿಕ್ಕೋಡಿ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಬೆಳಗಾವಿ ಜಿಲ್ಲೆ ಕಾಂಗ್ರೆಸ್ ಅಭ್ಯರ್ಥಿಗಳು ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.//////