Belagavi News In Kannada | News Belgaum

ಗೋಕಾಕ ಕಾಂಗ್ರೆಸ್ ಅಭ್ಯರ್ಥಿ ಕಡಾಡಿ ನಾಮಪತ್ರ ಸಲ್ಲಿಕೆ; ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಸಾಥ್

ಗೋಕಾಕ: ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಡಾ‌. ಮಹಾಂತೇಶ ಕಡಾಡಿ ಅವರು ಮಂಗಳವಾರ ನಗರದ ಮಿನಿ ವಿಧಾನಸೌಧದಲ್ಲಿ ಚುನಾವಣಾಧಿಕಾರಿ ಗೀತಾ ಕೌಲಗಿ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.

ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ತಮ್ಮ ಅಪಾರ ಬೆಂಬಲಿಗರೊಂದಿಗೆ ಆಗಮಿಸಿದ ಡಾ‌. ಮಹಾಂತೇಶ ಕಡಾಡಿ ಅವರು ಬಸವೇಶ್ವರ ವೃತ್ತದಲ್ಲಿ ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು .

ಡಾ. ಮಹಾಂತೇಶ ಕಡಾಡಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಸಾಥ್ ನೀಡಿ,
ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಲೆ ಇದೆ. ಕಾಂಗ್ರೆಸ್ ಪಕ್ಷ ಅಧಿಕಾರಿಕ್ಕೆ ಬರುವುದು ನಿಶ್ಚಿತ. ಅಶೋಕ್ ಪೂಜಾರಿ ಅವರ ಮನವೊಲಿಸಿ ಅವರನ್ನು ಸಹ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸುವಂತೆ ಮನವಿ ಮಾಡಲಾಗುವುದು. ಅವರು ಸಹ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವ ವಿಶ್ವಾಸವಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಹಲವು ಕಾಂಗ್ರೆಸ್‌ ಮುಖಂಡರು ಇದ್ದರು./////