ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಮೌಲ್ಯದ ಟಿಫಿನ್ ಬಾಕ್ಸ್-ಹೊಲಿಗೆ ಯಂತ್ರ ಜಪ್ತಿ

ಬೆಳಗಾವಿ: ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ ಹೊಲಿಗೆ ಯಂತ್ರಗಳು ಮತ್ತು ಟಿಫಿನ್ ಬಾಕ್ಸ್‌ಗಳನ್ನು ಪೊಲೀಸರು ಜಪ್ತಿ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದಿದೆ.
ನಗರದ ಸಂಭವ ಟಿಂಬರ್ ಯಾರ್ಡ್ ಗೋದಾಮು ಮೇಲೆ ಚುನಾವಣಾಧಿಕಾರಿಗಳು ದಾಳಿ ನಡೆಸಿ ಸವದತ್ತಿ ಕೇತ್ರದ ಜೆಡಿಎಸ್ ಅಭ್ಯರ್ಥಿ ಸೌರಭ್ ಛೋಪ್ರಾ ಭಾವಚಿತ್ರವಿರುವ ಟಿಫಿನ್ ಬಾಕ್ಸ್ ಜೊತೆಗೆ ಹೊಲಿಗೆ ಯಂತ್ರಗಳನ್ನು ಜಪ್ತಿ ಪಡಿಸಿಕೊಂಡಿದ್ದಾರೆ. ಲಕ್ಷಾಂತರ ಮೌಲ್ಯದ 2300ಕ್ಕೂ ಅಧಿಕ ಹೊಲಿಗೆ ಯಂತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಖಚಿತ ಮಾಹಿತಿ ಆಧಾರದ ಮೇಲೆ ಸರಕು ಮತ್ತು ಸೇವಾ ತೆರಿಗೆ ಅಧಿಕಾರಿಗಳು ಹಾಗೂ ಸ್ಥಳೀಯ ಚುನಾವಣೆ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಸೌರಭ್ ಛೋಪ್ರಾ ಹೊಲಿಗೆ ಯಂತ್ರ ಇರುವ ಕುರಿತಾಗಿ ಬಿಲ್ ಹಾಗೂ ಅದಕ್ಕೆ ಬೇಕಾದ ದಾಖಲೆಗಳನ್ನು ಒದಗಿಸಿದ್ದಾರೆ. ನೀತಿ ಸಂಹಿತೆ ಬರುವ ಮುಂಚೆಯೇ ಇವುಗಳನ್ನು ತರಲಾಗಿದೆ. ಆದರೆ ಎಲ್ಲಿಯೂ ಹಂಚಿಲ್ಲ ಎಂದು ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಅಭ್ಯರ್ಥಿ ಕಡೆಯವರು ಪೋಲಿಸರ ನೇತೃತ್ವದಲ್ಲಿ ಗೋದಾಮು ಸೀಜ್ ಮಾಡಿದ್ದು, ನಂತರ ಗೋದಾಮಿನಲ್ಲಿರುವ ಹೊಲಿಗೆ ಯಂತ್ರ ಹಾಗೂ ಟಿಫಿನ್ ಬಾಕ್ಸ್‌ಗಳನ್ನು ವಶಕ್ಕೆ ಪಡೆದು ಬೇರೆಡೆ ಸ್ಥಳಾಂತರಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಲಾಗಿದೆ./////